ಹಣ ಸುಲಿಗೆಗೆ ಸಂಚು ರೂಪಿಸಿದ್ದ ಗ್ಯಾಂಗ್ ಬಂಧನ

ಕಲಬುರಗಿ, ಸೆ. ೫: ಕಲಬುರಗಿಯಲ್ಲಿ ಸ್ತಿçÃರೋಗ ತಜ್ಞರೊಬ್ಬರ ಕೊಲೆ ಯತ್ನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮಂಗಳವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ರಾಜ್ಯದ ಸ್ತಿçÃರೋಗ ತಜ್ಞರು, ಫೈನಾನ್ಶಿಯರ್‌ಗಳನ್ನು ಗುರಿಯಾಗಿಸಿಕೊಂಡು ಅವರಿಂದ ಭಾರಿ ಹಣ ಸುಲಿಗೆಗೆ ಸಂಚು ರೂಪಿಸಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ. ಬಂಧಿತರನ್ನು ಸರ್ಫುದ್ದೀನ್ ಮತ್ತು ಕಮರುದ್ದೀನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಹೆಚ್ಚಿನ ಶುಲ್ಕ ವಿಧಿಸುವ ಸ್ತಿçÃರೋಗ ತಜ್ಞರು ಮತ್ತು ಭಾರಿ ಬಡ್ಡಿ ವಿಧಿಸುವ ಫೈನಾನ್ಶಿಯರ್‌ಗಳನ್ನು ಗುರಿಯಾಗಿಸಿಕೊಂಡಿದ್ದರು. ಕಲಬುರಗಿಯ ಖ್ಯಾತ ಸ್ತಿçÃರೋಗ ತಜ್ಞ ಜಯಪ್ರಕಾಶ ಪಾಟೀಲರನ್ನು ಗುರಿಯಾಗಿಸಿಕೊಂಡು ಈ ಗ್ಯಾಂಗ್ ಯೋಜನೆ ರೂಪಿಸಿತ್ತು. ಪಾಟೀಲ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದು, ಅವರನ್ನು ಟಾರ್ಗೆಟ್ ಮಾಡಿದರೆ ಅದು ಇತರರಲ್ಲಿಯೂ ಭಯ ಸೃಷ್ಟಿಸುತ್ತದೆ ಎಂದು ಆರೋಪಿಗಳು ಭಾವಿಸಿದ್ದರು. ಪಾಟೀಲರ ಚಲನವಲನಗಳನ್ನು ಒಂದು ತಿಂಗಳ ಕಾಲ ಸೂಕ್ಷö್ಮವಾಗಿ ಗಮನಿಸಿದ ತಂಡ ಜೂನ್‌ನಲ್ಲಿ ಅವರಿಗೆ ಕರೆ ಮಾಡಿತ್ತು. ಈ ವೇಳೆ ಹಿಂದಿಯಲ್ಲಿ ಮಾತನಾಡುತ್ತಿದ್ದ ಗ್ಯಾಂಗ್, ೩೦,೦೦೦ ಡಾಲರ್‌ಗಳನ್ನು ತಮ್ಮ ಖಾತೆಗಳಿಗೆ ಕ್ರಿಪ್ಟೋ ಕರೆನ್ಸಿ ರೂಪದಲ್ಲಿ ಜಮೆ ಮಾಡುವಂತೆ ಒತ್ತಾಯಿಸಿದ್ದರು. ವೈದ್ಯ ಪಾಟೀಲ್ ಹಣ ನೀಡಲು ನಿರಾಕರಿಸಿದಾಗ ಆರೋಪಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಆಗಸ್ಟ್ ೩೧ ರಂದು ಕಾರಿನಲ್ಲಿ ಹೋಗುತ್ತಿದ್ದಾಗ, ವೈದ್ಯರನ್ನು ಅಡ್ಡಗಟ್ಟಲಾಗಿತ್ತು ಮತ್ತು ನಗರದ ಹೊರವಲಯದಲ್ಲಿರುವ ಸಾಥ್ ಮೈಲ್ ಪ್ರದೇಶದ ಬಳಿ ಅವರ ಮೇಲೆ ಗುಂಡು ಹಾರಿಸಲಾಯಿತು. ಆದರೆ, ಅವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದರು. ಆರೋಪಿಗಳು ಭೂಗತ ಲೋಕದಲ್ಲಿ ಹೆಸರು ಗಳಿಸಿ ಹಣ ಸಂಪಾದಿಸಲು ಬಯಸಿದ್ದರು. ಕಲಬುರಗಿಯಲ್ಲಿ ಮತ್ತೊಂದು ಗ್ಯಾಂಗ್ ಕಾರ್ಯಾಚರಿಸುತ್ತಿದ್ದರಿಂದ ರಾಯಚೂರನ್ನು ಅಪರಾಧ ಕೃತ್ಯಕ್ಕೆ ಆಯ್ಕೆ ಮಾಡಿಕೊಂಡಿದ್ದರು ಎಂದು ಬಳ್ಳಾರಿ ರೇಂಜ್ ಐಜಿ ಲೋಕೇಶ್ ಕುಮಾರ್ ತಿಳಿಸಿದ್ದಾರೆ.

ಕಾವೇರಿ ವಿವಾದ: ಅರ್ಜಿ ವಿಚಾರಣೆ ಸೆಪ್ಟೆಂಬರ್ ೬ಕ್ಕೆ ಮುಂದೂಡಿಕೆ

ನವದೆಹಲಿ, ಸೆ. ೫: ಕರ್ನಾಟಕ ಮತ್ತು ತಮಿಳು ನಾಡಿನ ಮಧ್ಯೆ ಕಾವೇರಿ ಜಲ ವಿವಾದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ ೬ಕ್ಕೆ ಮುಂದೂಡಿದೆ. ಕರ್ನಾಟಕ ಸರ್ಕಾರ ೨೪ ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡುಗಡೆ ಮಾಡಬೇಕೆಂದು ಆದೇಶ ನೀಡಬೇಕೆಂದು ಕೋರಿ ತಮಿಳು ನಾಡು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿದ್ದು, ಇಂದು ವಿಚಾರಣೆ ನಡೆಸಬೇಕಾಗಿತ್ತು. ಆದರೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ ೬ಕ್ಕೆ ಮುಂದೂಡಿದೆ. ತಮಿಳುನಾಡಿಗೆ ನೀರು ಬಿಡಬೇಕು ಎಂಬ ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಕರ್ನಾಟಕ ಸರ್ಕಾರ ಕೂಡ ಪ್ರಶ್ನಿಸಲಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದು, ಅಣೆಕಟ್ಟುಗಳಿಗೆ ಸಮಿತಿ ಸದಸ್ಯರ ಆಹ್ವಾನಿಸಿ ವಾಸ್ತವಾಂಶ ತಿಳಿಯುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಶೃಂಗಸಭೆ ಯಶಸ್ಸಿಗೆ ಶ್ರಮಿಸಲು ಸಿದ್ಧ: ಚೀನಾ

ಬೀಜಿಂಗ್, ಸೆ. ೫: ಈ ಬಾರಿ ಜಿ ೨೦ ಶೃಂಗಸಭೆ ಆಯೋಜಿಸುತ್ತಿರುವ ಭಾರತವನ್ನು ಬೆಂಬಲಿಸುವುದಾಗಿ ಚೀನಾ ಮಂಗಳವಾರ ಹೇಳಿದೆ. ನವದೆಹಲಿಯಲ್ಲಿ ಈ ವಾರದಿಂದ ನಡೆಯಲಿರುವ ಉನ್ನತ ಮಟ್ಟದ ಜಾಗತಿಕ ಸಮ್ಮೇಳನದ ಯಶಸ್ಸಿಗಾಗಿ ಎಲ್ಲಾ ರಾಷ್ಟçಗಳೊಂದಿಗೆ ಶ್ರಮಿಸಲು ಸಿದ್ಧವಾಗಿರುವುದಾಗಿ ತಿಳಿಸಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಬದಲಿಗೆ ಪ್ರೀಮಿಯರ್ ಲಿ ಕಿಯಾಂಗ್ ಜಿ ೨೦ ಶೃಂಗಸಭೆಯಲ್ಲಿ ತಮ್ಮ ರಾಷ್ಟçವನ್ನು ಪ್ರತಿನಿಧಿಸುತ್ತಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಘೋಷಿಸಿದ ಒಂದು ದಿನದ ನಂತರ ಚೀನಾ ವಕ್ತಾರರು ಸುದ್ದಿಗಾರರಿಗೆ ಹೀಗೆ ತಿಳಿಸಿದ್ದಾರೆ. ಇದೇ ತಿಂಗಳ ೯ ಮತ್ತು ೧೦ ರಂದು ನವದೆಹಲಿಯಲ್ಲಿ ನಡೆಯಲಿರುವ ಜಿ-೨೦ ಶೃಂಗಸಭೆ ಸಮಾವೇಶ ಜಾಗತಿಕ ಆರ್ಥಿಕ ಸಹಕಾರಕ್ಕೆ ಪ್ರಮುಖ ವೇದಿಕೆಯಾಗಲಿದೆ. ಚೀನಾ-ಭಾರತ ಸಂಬAಧಗಳು ಒಟ್ಟಾರೆಯಾಗಿ ಸ್ಥಿರವಾಗಿವೆ. ವಿವಿಧ ಹಂತಗಳಲ್ಲಿ ಉಭಯ ರಾಷ್ಟçಗಳು ಸಂಭಾಷಣೆ ಹಾಗೂ ಸಂವಹನ ನಡೆಸುತ್ತಿರುವುದಾಗಿ ಅವರು ಗಡಿ ವಿವಾದವನ್ನು ಉಲ್ಲೇಖಿಸದೆ ತಿಳಿಸಿದ್ದಾರೆ.

೫೦೦ ಕೋಟಿ ಅನುದಾನಕ್ಕೆ ಮನವಿ : ಈಶ್ವರ ಖಂಡ್ರೆ

ಬೆಂಗಳೂರು, ಸೆ. ೫: ಕಳೆದ ೧೫ ದಿನಗಳ ಅಂತರದಲ್ಲಿ ಮಾನವ-ವನ್ಯಜೀವಿ ಸಂಘರ್ಷದಲ್ಲಿ ೧೧ ಜನರು ಸಾವಿಗೀಡಾಗಿದ್ದು, ಅಮೂಲ್ಯ ಜೀವ ಹಾನಿ ತಪ್ಪಿಸಲು ಅಗತ್ಯ ಮತ್ತು ತುರ್ತು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕಾಗಿ ಮುಖ್ಯಮಂತ್ರಿಗಳಿಗೆ ೫೦೦ ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನ ತಮ್ಮ ಕಚೇರಿಯಲ್ಲಿಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಅರಣ್ಯ ಘಟಕದ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವ ಮತ್ತು ವನ್ಯ ಜೀವಿ ಸಂಘರ್ಷ ಇಂದು ನಿನ್ನೆಯದೇನಲ್ಲ. ಹಿಂದಿನಿAದ ನಡೆಯುತ್ತಿದೆ. ಆದರೆ, ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದು, ಕಾಡು ಪ್ರಾಣಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಂಘರ್ಷಗಳು ಹೆಚ್ಚಾಗುತ್ತಿವೆ ಎಂದು ತಿಳಿಸಿದರು. ಈ ಬಾರಿ ವಾಡಿಕೆಗಿಂತ ಬಹಳ ಕಡಿಮೆ ಮಳೆ ಆಗಿದ್ದು, ಕಾಡಿನಲ್ಲಿ ಕುಡಿಯುವ ನೀರು ಮತ್ತು ಆಹಾರದ ಸಮಸ್ಯೆಯಿಂದಾಗಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯದೊಳಗೆ ವನ್ಯಜೀವಿಗಳಿಗೆ ಸೂಕ್ತ ಆಹಾರ ದೊರಕುವಂತೆ ಮಾಡುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಲಾಗಿದೆ ಎಂದರು. ಆನೆ ಕಾರಿಡಾರ್‌ಗಳಲ್ಲಿ ರಸ್ತೆ, ರೈಲು, ವಿದ್ಯುತ್ ಕಂಬ, ನೀರಿನ ಕೊಳವೆ ಅಳವಡಿಕೆಗಾಗಿ ಕೆಲವು ಭಾಗ ಬಳಕೆಯಾಗಿದೆ. ಆದರೆ, ಖಾಸಗಿಯವರಿಂದ ಒತ್ತುವರಿ ಆಗಿದ್ದರೆ ಇದನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಿ, ಆನೆ ಕಾರಿಡಾರ್ ರಕ್ಷಿಸಲಾಗುವುದು. ಅರಣ್ಯದೊಳಗೆ ಅಥವಾ ಅರಣ್ಯದ ಅಂಚಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ಅವಕಾಶ ಇರುವುದಿಲ್ಲ. ಅಂತಹ ಗಣಿಗಾರಿಕೆ ನಡೆಯುತ್ತಿರುವುದು ಕಂಡುಬAದರೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಅರಣ್ಯಾಧಿಕಾರಿಗಳ ಲೋಪ ಕಂಡುಬAದರೆ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದರು.