ವೀರಾಜಪೇಟೆ, ಸೆ. ೫: ಇತ್ತೀಚೆಗೆ ಅಮ್ಮತ್ತಿಯ ನೇತಾಜಿ ಶಾಲೆಯಲ್ಲಿ ನಡೆದ ಅಮ್ಮತ್ತಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟದಲ್ಲಿ ವೀರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿದ್ದಾರೆ.
ಪ್ರಾಥಮಿಕ ಬಾಲಕರ ಹಾಗೂ ಬಾಲಕಿಯರ ವಿಭಾಗದ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿ ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿ ದ್ದಾರೆ.
ಪ್ರಾಥಮಿಕ ವಿಭಾಗದ ಬಾಲಕರ ಥ್ರೋಬಾಲ್ ಪಂದ್ಯಾವಳಿ ಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ರನ್ನರ್ ಅಪ್ ಆಗಿದ್ದಾರೆ. ಇವರಿಗೆ ತರಬೇತಿಯನ್ನು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಮೋನಿಕಾ ಕಾವೇರಿ ಎಂ.ಪಿ. ಹಾಗೂ ಲಾವಣ್ಯ ಬಿ.ವಿ. ನೀಡಿದ್ದಾರೆ.