ಕುಶಾಲನಗರ, ಸೆ. ೫: ಬೆಂಗ ಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾ ಲಯ, ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಕುಶಾಲನಗರ ಬಾಲಕಿ ಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ವಿಜ್ಞಾನ ಸಂಘದ ಆಶ್ರಯ ದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೋಮವಾರಪೇಟೆ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಹಾಗೂ ನಾಟಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾ ಡಿದ ಮಂಗಳೂರು ಶಿಕ್ಷಣ ಮಹಾ ವಿದ್ಯಾಲಯದ ಉಪನ್ಯಾಸಕ ಎಚ್.ಬಿ. ಶಿವಾನಂದ, ವಿಜ್ಞಾನ ಮನುಷ್ಯನ ಬದುಕಿನ ಅವಿಭಾಜ್ಯ ಅಂಗವಾಗಿದೆ. ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಅಧ್ಯಯನ ಕೈಗೊಂಡು ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಬೇಕು ಎಂದರು.ಅಧ್ಯಕ್ಷತೆ ವಹಿಸಿ ಸಿರಿಧಾನ್ಯಗಳ ಮಹತ್ವ ಕುರಿತು ಮಾತನಾಡಿದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ. ಮಂಜೇಶ್, ವಿಶ್ವ ಸಿರಿಧಾನ್ಯ ಗಳ ವರ್ಷಾಚರಣೆ ಅಂಗವಾಗಿ ದಿನನಿತ್ಯ ಜೀವನದಲ್ಲಿ ಮರೆಯಾಗು ತ್ತಿದ್ದ ಸಿರಿಧಾನ್ಯಗಳ ಬಳಕೆ ಬಗ್ಗೆ ಜನ ಜಾಗೃತಿ ಮೂಡಿಸಲು ಇಂತಹ ಸ್ಪರ್ಧೆ ಗಳು ಸಹಕಾರಿಯಾಗಿವೆ ಎಂದರು.

‘ದಿನನಿತ್ಯ ಜೀವನದಲ್ಲಿ ವಿಜ್ಞಾನ ಬಳಕೆ’ ಕುರಿತು ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ವಿದ್ಯಾರ್ಥಿಗಳು ಮೂಲ ವಿಜ್ಞಾನ ವಿಷಯಗಳಲ್ಲಿ ಹೆಚ್ಚಿನ ಅಧ್ಯಯನ ಕೈಗೊಂಡು ವಿಜ್ಞಾ ನಿಗಳಂತೆ ವಿಜ್ಞಾನದ ಅನ್ವೇಷಣೆ ಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಮೂಢನಂಬಿಕೆಗಳಿAದ ದೂರವಿದ್ದು, ವಿಜ್ಞಾನದ ನಡಿಗೆ ಮೂಲಕ ವಿಜ್ಞಾನ ಕ್ಷೇತ್ರದ ಸಾಧನೆಯಲ್ಲಿ ತೊಡಗಿಕೊಳ್ಳಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸ್ಪರ್ಧಾ ಕಾರ್ಯಕ್ರಮದ ತಾಲೂಕು ನೋಡಲ್ ಅಧಿಕಾರಿ ಕೆ.ಬಿ. ರಾಧಾಕೃಷ್ಣ, ಮಕ್ಕಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಇಂತಹ ಸ್ಪರ್ಧೆ ಸಂಘಟಿಸಲಾಗಿದೆ ಎಂದರು.

ಶಾಲೆಯ ಮುಖ್ಯೋಪಾಧ್ಯಾ ಯಿನಿ ಬಿ.ಎನ್.ಪುಷ್ಪ, ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಯ್ಯ, ಮುಕಾಂಬಿಕಾ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಸ್.ಎಸ್.ಗೋಪಾಲ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕೆ.ಆರ್. ರಾಣಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೈಸೂರು ವಿಭಾಗದ ಉಪಾಧ್ಯಕ್ಷ ಪಿ.ನವೀನ್ ಕುಮಾರ್, ಬಿಆರ್‌ಪಿ ಎಸ್.ಎನ್. ಲೋಕೇಶ್, ಇಸಿಓ ಎಚ್.ಆರ್. ಶೇಖರ್, ಯಲ್ಲಪ್ಪ ಪೂಜಾರಿ, ವಿವಿಧ ಶಾಲೆಗಳ ವಿಜ್ಞಾನ ವಿಷಯದ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಕ್ಷಕ ಕೆ.ಸಿ.ಶಿವಣ್ಣ ಕಾರ್ಯಕ್ರಮ ನಿರ್ವಹಿಸಿದರು.