ಮಡಿಕೇರಿ, ಸೆ. ೫: ಚೇರಂಬಾಣೆ ಅಂಗನವಾಡಿ ಕೇಂದ್ರದಲ್ಲಿ ಬೇಂಗೂರು ಪಂಚಾಯಿತಿಯ ಪೋಷಣ್ ಮಾಸಾಚರಣೆ, ಪೌಷ್ಟಿಕ ಆಹಾರ ಸಪ್ತಾಹ, ಮಾತೃವಂದನಾ ಸಪ್ತಾಹ, ಅನ್ನ ಪ್ರಾಸನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೇಂಗೂರು ಗ್ರಾ.ಪಂ. ಅಧ್ಯಕ್ಷರಾದ ಪಟ್ಟಮಾಡ ಮಿಲನ್ ಮುತ್ತಣ್ಣ ಅವರು ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನ ಮೇಲ್ವಿಚಾರಕಿ ಹಾಗೂ ಆರೋಗ್ಯ ಇಲಾಖೆ ಕಾರ್ಯಕರ್ತೆ ಲಲಿತಾ, ಪೋಷಣ್ ಸಂಯೋಜಕ ರಾದ ನಿತಿನ್ ಅವರು, ಪೋಷಣ್ ಅಭಿಯಾನದ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯಿತಿ ಸದಸ್ಯರು ಹಾಗೂ ಪೋಷಕರು ಹಾಜರಿದ್ದರು.