ಚೆಯ್ಯಂಡಾಣೆ, ಸೆ. ೫: ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚೆಯ್ಯಂಡಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಗಳನ್ನು ಹೊರತರಲು ಸರಕಾರ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು ಶಿಕ್ಷಕರು ವಿದ್ಯಾರ್ಥಿಗಳನ್ನು ಮುಂದೆ ತರಲು ಪ್ರಯತ್ನಿಸಬೇಕು ಎಂದರು.
ನರಿಯAದಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತರಲು ಈ ಚೆಯ್ಯಂಡಾಣೆ, ಸೆ. ೫: ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚೆಯ್ಯಂಡಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಗಳನ್ನು ಹೊರತರಲು ಸರಕಾರ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು ಶಿಕ್ಷಕರು ವಿದ್ಯಾರ್ಥಿಗಳನ್ನು ಮುಂದೆ ತರಲು ಪ್ರಯತ್ನಿಸಬೇಕು ಎಂದರು.
ನರಿಯAದಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತರಲು ಈ ಕಾರ್ಯಕ್ರಮ ಸಹಕಾರಿ ಎಂದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಸಂಪನ್ಮೂಲ ವ್ಯಕ್ತಿ ಪ್ರಸಾದ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷೆ ಫಾತಿಮಾ ವಹಿಸಿದ್ದರು.
ಚೆಯ್ಯಂಡಾಣೆ ಕ್ಲಸ್ಟರ್ಗೆ ಒಳಪಟ್ಟ ೧೫ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಂದ ಭಾಷಣ, ಹಾಡು, ಭಕ್ತಿಗೀತೆ, ಭರತನಾಟ್ಯ, ಗಾದೆ, ಛÀದ್ಮ ವೇಷ, ಮಣ್ಣಿನ ಕಲಾಕೃತಿ, ಕರಕುಶಲ ಕಲಾಕೃತಿ ರಚನೆ, ಚಿತ್ರಕಲೆ ಸೇರಿದಂತೆ ಹಲವಾರು ಕಾರ್ಯಕ್ರಮಗಳು ಜರುಗಿದವು. ಇದರಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದÀ ವಿದ್ಯಾರ್ಥಿಗಳನ್ನು ತಾಲೂಕು ಮಟ್ಟಕ್ಕೆ ಆಯ್ಕೆ ಮಾಡಲಾಯಿತು.
ಈ ಸಂದರ್ಭ ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಸ್ಥಳ ದಾನಿಗಳಾದ ಕಣಿಯರ ಪ್ರಕಾಶ್, ಸ್ಥಳೀಯ ಆಯುಷ್ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೈಲಜಾ, ಎಸ್ಡಿಎಂಸಿ ಸದಸ್ಯರು, ಪೋಷಕರು, ಕ್ಲಸ್ಟರ್ ಮಟ್ಟದ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕಿ ಶಾಂತಿ ಕುಮಾರಿ ಸ್ವಾಗತಿಸಿ, ಶಿಕ್ಷಕಿ ವಿಮಲಾ ನಿರೂಪಿಸಿ, ವತ್ಸಲ ವಂದಿಸಿದರು.