ಮಡಿಕೇರಿ, ಸೆ.೫ : ಮಡಿಕೇರಿ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೬ ಭಾಗಮಂಡಲ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ತಾ. ೭ ರಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ತಾಳತ್ತ್ಮನೆ, ಉಡೋತ್ತುಮೊಟ್ಟೆ, ಚೇರಂಬಾಣೆ, ಅಪ್ಪಂಗಳ, ಭಾಗಮಂಡಲ, ತಲಕಾವೇರಿ, ಚೇರಂಗಾಲ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.