ಮಡಿಕೇರಿ, ಸೆ.೫ : ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕ ವೃತ್ತಿಗೆ ತನ್ನದೇ ಆದ ಗೌರವ ಸ್ಥಾನವಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ತಿಳಿಸಿದ್ದಾರೆ.
ಕೊಡಗು ಗೌಡ ಸಮಾಜದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಿಕ್ಷಕರ ಸೇವೆಯನ್ನು ಯಾರೂ ಸಹ ಮರೆಯುವುದಿಲ್ಲ. ಪುಸ್ತಕ ಮೂಲಕ ಪಾಠ ಮಾಡುವುದಕ್ಕೂ, ಮನಸ್ಸಿನ ಮೂಲಕ ಪಾಠ ಮಾಡುವುದಕ್ಕೂ ಬಹಳ ವ್ಯತ್ಯಾಸವಿದೆ. ಆ ನಿಟ್ಟಿನಲ್ಲಿ ಮಕ್ಕಳ ಜ್ಞಾನಾರ್ಜನೆ ಹೆಚ್ಚಿಸುವಲ್ಲಿ ಶಿಕ್ಷಕರ ಸೇವೆ ಮಹತ್ವದ್ದಾಗಿದೆ. ಶಿಕ್ಷಕರು ಹಲವು ಮೂಲ ಸೌಲಭ್ಯಗಳ ಕೊರತೆಯ ನಡುವೆಯೂ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿಸಲು ಪ್ರಯತ್ನಿಸುತ್ತಾರೆ. ಮಕ್ಕಳನ್ನು ಸರಿದಾರಿಗೆ ತರಲು ಸದಾ ಯೋಚಿಸುತ್ತಾರೆ.
ವೈದ್ಯಕೀಯ ವಿಭಾಗದಲ್ಲಿ ನಾನು ಸಹ ಪ್ರಾಧ್ಯಾಪಕನಾಗಿ ಸೇವೆ ಸಲ್ಲಿಸಿದ್ದೇನೆ. ಆ ನಿಟ್ಟಿನಲ್ಲಿ ಶಿಕ್ಷಕರ ಜವಾಬ್ದಾರಿ
(ಮೊದಲ ಪುಟದಿಂದ) ಮತ್ತು ಹೊಣೆಗಾರಿಕೆ ಹೆಚ್ಚಿನದ್ದಾಗಿದೆ. ಎಲ್ಲಾ ರೀತಿಯಲ್ಲಿ ಶಾಲೆಯ ಅಭಿವೃದ್ಧಿಗೆ ಸಹಕರಿಸಲಾಗುವುದು ಎಂದು ಹೇಳಿದರು.
ಸರ್ಕಾರಿ ಶಾಲೆಯಲ್ಲಿ ಓದಿದವರು ಒಳ್ಳೆಯ ವಿದ್ಯಾರ್ಥಿಗಳಾಗಿ ಹೊರಹೊಮ್ಮಿ ವಿಜ್ಞಾನ, ತಂತ್ರಜ್ಞಾನ ಹೀಗೆ ವಿವಿಧ ಕ್ಷೇತ್ರದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದಾರೆ. ಕೊಡಗು ಜಿಲ್ಲೆ ಶೈಕ್ಷಣಿಕವಾಗಿ ಮುಂದೆ ಇದೆ. ಆ ನಿಟ್ಟಿನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ದಲ್ಲಿಯೂ ಸಹ ಇನ್ನಷ್ಟು ಉನ್ನತ ಸ್ಥಾನ ಪಡೆಯುವಂತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ ಶಿಕ್ಷಕರು ಮಕ್ಕಳಿಗೆ ದಾರಿ ದೀಪವಾಗಿದ್ದಾರೆ. ಮಕ್ಕಳಿಗೆ ತಾಳ್ಮೆ, ಸಹನೆ ಕಲಿಸಿ, ಅಕ್ಷರ ಅಭ್ಯಾಸ ಮಾಡಿಸುತ್ತಾರೆ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಉತ್ತಮ ಪ್ರಜೆಗಳನ್ನಾಗಿ ಮಾಡುವಲ್ಲಿ ಶಿಕ್ಷಕರು ಶ್ರಮಿಸುತ್ತಾರೆ.
ಶಿಕ್ಷಕರ ವೃತ್ತಿಯನ್ನು ಸದಾ ಸ್ಮರಿಸುತ್ತಾರೆ. ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಶಿಕ್ಷಕರು ತಮ್ಮದೇ ಆದ ಪಾತ್ರ ವಹಿಸುತ್ತಾರೆ ಎಂದು ಹೇಳಿದರು. ಜಿ.ಪಂ. ಸಿಇಓ ವರ್ಣಿತ್ ನೇಗಿ ಮಾತನಾಡಿ, ಶಿಕ್ಷಕರೇ ದೇವರಾಗಿದ್ದು, ಶಿಕ್ಷಕರನ್ನು ಸದಾ ಗೌರವಿಸುತ್ತೇವೆ. ಎಲ್ಲಾ ಮಕ್ಕಳನ್ನು ಪ್ರೀತಿ, ಗೌರವದಿಂದ ಕಾಣುತ್ತಾರೆ.
ಮಕ್ಕಳ ವಿದ್ಯಾರ್ಜನೆಯ ಜೊತೆಗೆ ಅವರ ಅಭಿರುಚಿಯನ್ನು ಗುರುತಿಸಿ ಕಲೆ, ಸಾಹಿತ್ಯ, ಸಂಸ್ಕೃತಿ, ನಾಟಕ, ಹೀಗೆ ಹಲವು ಕ್ಷೇತ್ರಗಳಿಗೂ ಶಿಕ್ಷಕರು ಪ್ರೋತ್ಸಾಹಿಸುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಕಾರ್ಯದರ್ಶಿ ಎಚ್.ಎಸ್.ಚೇತನ್ ಅವರು ಮಾತನಾಡಿ ಶಿಕ್ಷಕರ ದಿನಾಚರಣೆ ಅಂಗವಾಗಿ ಸಂಘಟನೆಗೆ ಮುಂದಿನ ದಿನಗಳಲ್ಲಿ ದತ್ತಿನಿಧಿ ಸ್ಥಾಪಿಸಲಾ ಗುವುದು. ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ಶಿಕ್ಷಕರ ಸಮಸ್ಯೆಯನ್ನು ಪರಿಹರಿಸಲು ಶಿಕ್ಷಕರ ಸಂಘವು ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದರು. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಧಾನ ಮಾಡ ಲಾಯಿತು. ಹಾಗೆಯೇ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎ.ಯೋಗೇಶ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವಿಭಾಗೀಯ ಉಪಾಧ್ಯಕ್ಷ ಪಿ. ನವೀನ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕಿ ಸೌಮ್ಯ ಪೊನ್ನಪ್ಪ, ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕ ಎಂ.ಚAದ್ರಕಾAತ್, ಡಿವೈಪಿಸಿ ಎಂ.ಕೃಷ್ಣಪ್ಪ, ಜಿಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಪಿ.ಗುರುರಾಜ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಶೇಖರ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್.ಮಂಜುನಾಥ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸದಾಶಿವ ಪಲ್ಲೇದ್, ಜಿಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭುಕುಮಾರ್, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ.ಕುಮಾರ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್ ಪಿ.ಎ., ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಯ್ಯ, ಎಸ್ಸಿ ಎಸ್ಟಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಪಾರ್ವತಿ, ತಾಲೂಕು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸುಕ್ರುದೇವುಗೌಡ, ಜಿ.ಎಂ.ಹೇಮAತ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರವಿಕೃಷ್ಣ ಪಿ.ಎಸ್., ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ, ಅನುದಾನಿತ ಪ್ರೌಢಶಾಲಾ ಮತ್ತು ಕಾಲೇಜು ನೌಕರರ ಸಂಘದ ಅಧ್ಯಕ್ಷ ಶಿವಪ್ರಸಾದ್, ದೈಹಿಕ ಶಿಕ್ಷಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕಿರಣ್ ಪಿ.ಎಂ., ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ತಾಲೂಕು ಅಧ್ಯಕ್ಷ ಅಶೋಕ್ ಕೆ.ಜಿ., ಇತರರು ಇದ್ದರು. ಎಚ್.ಜಿ.ಕುಮಾರ್ ನಿರೂಪಿಸಿದರು.