ಮಡಿಕೇರಿ, ಸೆ.೬ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ೮ ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ(ನೇರ ನಗದು ವರ್ಗಾವಣೆ) ಆನ್ಲೈನ್ ವೇದಿಕೆ ತಂತ್ರಾAಶದಡಿ ಅಳವಡಿಸಲಾಗಿದೆ.
ಆದ್ದರಿಂದ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ ಈ ೮ ಯೋಜನೆಗಳಿಗೆ ೨೦೨೩-೨೪ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್ಲೈನ್ ಮೂಲಕ (hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/Sevಚಿsiಟಿಜhu/ಆeಠಿಚಿಡಿಣmeಟಿಣSeಡಿviಛಿesಏಚಿಟಿಟಿಚಿಜಚಿ) ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ತಾ. ೩೦ ರವರೆಗೆ ಅವಧಿ ವಿಸ್ತರಿಸಲಾಗಿದೆ. ಜಿಲ್ಲೆಯ ವಿಕಲಚೇತನರು ತಾ. ೩೦ ರೊಳಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ೩ ತಾಲೂಕಿನ ತಾಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸುವAತೆ ಅಥವಾ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಯ ದೂ.ಸಂ.೦೮೨೭೨-೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.