ಸೋಮವಾರಪೇಟೆ, ಸೆ. ೬ : ಹರಿಯಾಣ, ದೆಹಲಿ ಮತ್ತು ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಹಿಂದೂಗಳ ಹತ್ಯೆ ಹಾಗೂ ರಾಷ್ಟಿçÃಯ ಸಂಪತ್ತನ್ನು ಹಾನಿಗೊಳಿಸಿದ ಪ್ರಕರಣದಲ್ಲಿ ಗಲಭೆಕೋರರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯವರು ತಹಶೀಲ್ದಾರ್ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ದೇಶಾದ್ಯಂತ ಹಿಂದೂಗಳ ಮೇಲೆ ಹಿಂಸಾತ್ಮಕ ಧಾಳಿಗಳು ನಡೆಯುತ್ತಿವೆ. ದೇಶದ ಭದ್ರತೆ, ಐಕ್ಯತೆ, ಸಮಗ್ರತೆ ಮತ್ತು ಶಾಂತಿಯನ್ನು ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ. ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡ ಹಿಂದೂಗಳಿಗೆ ತಲಾ ೧೦ ಲಕ್ಷ ರೂಪಾಯಿಗಳ ಪರಿಹಾರ ನೀಡಬೇಕು. ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು. ಅಲ್ಲದೆ ಸಂತ್ರಸ್ಥರ ಕುಟುಂಬದ ಮಕ್ಕಳ ಶಿಕ್ಷಣದ ಹೊರೆಯನ್ನು ಸರ್ಕಾರವೇ ಹೊರಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಮನವಿ ಸಲ್ಲಿಕೆ ಸಂದರ್ಭ ಹಿಂದೂ ಜನಜಾಗೃತಿ ಸಮಿತಿ ಸದಸ್ಯರಾದ ಪ್ರದೀಪ್ ಕುಮಾರ್, ಬಿ.ಜಿ. ರವಿ, ಶಶಿಧರ್ ಮತ್ತಿತರರು ಇದ್ದರು.