ಕ್ಷೀರ ಭಾಗ್ಯ ಯೋಜನೆಗೆ ಅಂರ್ರಾಷ್ಟಿçÃಯ ಮಟ್ಟದಲ್ಲಿ ಮೆಚ್ಚುಗೆ : ಸಿಎಂ
ತುಮಕೂರು, ಸೆ. ೬: ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು ೫೪ ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿರುವುದು. ಅಂರ್ರಾಷ್ಟಿçÃಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರ ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಎಲ್ಲಾ ಜಾತಿಯ ಎಲ್ಲಾ ಧರ್ಮದ ಬಡವರು ಮತ್ತು ಮಧ್ಯಮ ವರ್ಗದವರ ಮಕ್ಕಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಹತ್ತು ವರ್ಷಗಳಿಂದ ಪ್ರತೀ ದಿನ ಲಕ್ಷಾಂತರ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗುವಂತೆ ಮಾಡಿದ್ದೇವೆ. ಹೀಗಾಗಿ ನಮ್ಮ ಹೆಮ್ಮೆಯ ಈ ಯೋಜನೆ ಅಂರ್ರಾಷ್ಟಿçÃಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದೆ ಎಂದು ವಿವರಿಸಿದರು. ಬಡವರು, ಮಧ್ಯಮ ವರ್ಗದವರ ಬದುಕಿಗೆ ಅನುಕೂಲ ಆಗುವ ಕಾರ್ಯಕ್ರಮವನ್ನು ನಾವು ರೂಪಿಸಿದೆವು. ಸ್ವತಃ ಪ್ರಧಾನಿ ಮೋದಿಯವರು ಬಡವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿದ್ದರು ಎಂದರು. ಬಡವರು ಮಧ್ಯಮ ವರ್ಗದವರು ಸಮಾಧಾನದಿಂದ ಎರಡು ಹೊತ್ತು ಊಟ ಮಾಡಿದರೆ ಅದನ್ನು ವಿರೋಧಿಸಬೇಡಿ ಎಂದು ಸಿಎಂ ನುಡಿದರು. ಗೃಹ ಸಚಿವ ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಶಾಸಕರುಗಳಾದ ರಂಗನಾಥ್, ಷಡಾಕ್ಷರಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಶ್ರೀನಗರ, ಸೆ. ೬: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಸೇನಾ ಪಡೆ, ಬುಧವಾರ ಇಬ್ಬರು ಉಗ್ರರÀನ್ನು ಹೊಡೆದುರುಳಿಸಿದೆ. ಇಂದು ಪೂಂಚ್ ಜಿಲ್ಲೆಯಲ್ಲಿ ಯೋಧರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಒಬ್ಬ ಭಯೋತ್ಪಾದಕನ ಶವವನ್ನು ವಶಪಡಿಸಿಕೊಳ್ಳಲಾಗಿದ್ದು, ಎರಡನೆಯವನ ದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಮ್ಮು ಮೂಲದ ರಕ್ಷಣಾ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬರ್ತ್ವಾಲ್ ಹೇಳಿದ್ದಾರೆ. ಪೂಂಚ್ನ ಮಂಡಿ ಉಪ ವಲಯದಲ್ಲಿ ಮಂಗಳವಾರ ಮತ್ತು ಬುಧವಾರ ಇಬ್ಬರು ಭಯೋತ್ಪಾದಕರು ಎಲ್ಒಸಿ ದಾಟುತ್ತಿರುವುದನ್ನು ಗಮನಿಸಿದ ನಂತರ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅವರು ತಿಳಿಸಿದ್ದಾರೆ.
ಬಿಜೆಪಿ ತೊರೆದ ನೇತಾಜಿ ಮೊಮ್ಮಗ ಚಂದ್ರ ಕುಮಾರ್ ಬೋಸ್
ನವದೆಹಲಿ, ಸಎ. ೬: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಅವರು ಬುಧವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕೇಸರಿ ಪಕ್ಷದ ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ. ಚಂದ್ರ ಕುಮಾರ್ ಬೋಸ್ ಅವರು ೨೦೧೬ ರಲ್ಲಿ ಬಿಜೆಪಿ ಸೇರಿದ್ದರು ಮತ್ತು ೨೦೧೬ ರಲ್ಲಿ ವಿಧಾನಸಭೆ ಚುನಾವಣೆಗೆ ಮತ್ತು ೨೦೧೯ ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. "ನಾನು ಬಿಜೆಪಿಗೆ ಸೇರಿದಾಗ ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಶರತ್ ಚಂದ್ರ ಬೋಸ್ ಅವರನ್ನು ಒಳಗೊಳ್ಳುವ ಸಿದ್ಧಾಂತವನ್ನು ಪ್ರಚಾರ ಮಾಡಲು ನನಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ ಆ ರೀತಿ ಏನೂ ಆಗಲಿಲ್ಲ" ಎಂದು ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ. ೨೦೧೬ ರಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡ ಬೋಸ್ ಅವರನ್ನು ೨೦೨೦ರಲ್ಲಿ ಪಕ್ಷ ಪುನರ್ ರಚನೆ ಸಮಯದಲ್ಲಿ ಕೈಬಿಡಲಾಯಿತು.
ಮಗನ ಸಾವು, ಸುದ್ದಿ ಕೇಳಿ ಬಾವಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ
ತಿರುವನಂತಪುರA, ಸೆ. ೬: ಮಗನ ಸಾವಿನ ಸುದ್ದಿ ತಿಳಿದ ಸರ್ಕಾರಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಯನಾಡಿನಲ್ಲಿ ಪಶುವೈದ್ಯಕೀಯ ವಿದ್ಯಾರ್ಥಿಯಾಗಿದ್ದ ಆಕೆಯ ಪುತ್ರ ಎಂ. ಸಜ್ಜಿನ್ ಮಂಗಳವಾರ ಸಂಜೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಈ ಸುದ್ದಿ ಹೊರಬಿದ್ದಾಗ, ರಾಜಧಾನಿಯ ಹೊರವಲಯದಲ್ಲಿರುವ ನೆಡುಂಗಡುವಿನಲ್ಲಿ ವಾಸಿಸುವ ಶೀಜಾ ಬೇಗಂ ಅವರ ಆಪ್ತರು ಈ ಸುದ್ದಿ ತಿಳಿದು ವಯನಾಡಿಗೆ ಹೋಗಲು ನಿರ್ಧರಿಸಿದ್ದಾರೆ. ಮಗನ ಸಾವಿನ ಬಗ್ಗೆ ಶೀಜಾಗೆ ತಿಳಿಸದಿರಲು ನಿರ್ಧರಿಸಿದ್ದಾರೆ. ಬಳಿಕ ಅವರು ಆಕೆಯನ್ನು ಅವರ ಸಂಬAಧಿಯ ಮನೆಯಲ್ಲಿ ಉಳಿಯುವಂತೆ ಹೇಳಿದ್ದಾರೆ. ಮಂಗಳವಾರ ರಾತ್ರಿ ಶೀಜಾ ಅವರು ಫೇಸ್ಬುಕ್ ಮೂಲಕ ಮಗನ ಸಾವಿನ ವಿಷಯ ತಿಳಿದಿದ್ದಾರೆ. ಬಳಿಕ ರಾತ್ರಿ ತಂಗಿದ್ದ ಮನೆಯಲ್ಲಿದ್ದ ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ.
ರಸ್ತೆ ಅಪಘಾತ: ೭ ಮಂದಿ ಸಾವು, ಐವರಿಗೆ ಗಾಯ
ತಿನ್ಸುಕಿಯಾ, ಸೆ. ೬: ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆಂದು ಪೊಲೀಸರು ಬುಧವಾರ ಹೇಳಿದ್ದಾರೆ. ಕಾಕೋಪಥರ್ ಬಳಿಯ ಬೋರ್ಡಿರಾಕ್ ಟಿನಿಯಾಲಿ ಎಂಬಲ್ಲಿ ಈ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಟ್ರಕ್ವೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ೭ ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ೫ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಕ್ ಚಾಲಕ ಕುಡಿದ ಅಮಲಿನಲ್ಲಿದ್ದು, ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದುದ್ದೆ ಘಟನೆಗೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.