ಶನಿವಾರಸಂತೆ, ಸೆ. ೬: ಸಮೀಪದ ಕೊಡ್ಲಿಪೇಟೆ ಸಮೂಹ ಸಂಪನ್ಮೂಲ ಕೇಂದ್ರ ಮತ್ತು ಕೊಡ್ಲಿಪೇಟೆ ವಿದ್ಯಾಸಂಸ್ಥೆ ಸಹಭಾಗಿತ್ವದಲ್ಲಿ ಕೊಡ್ಲಿಪೇಟೆ ಮತ್ತು ಬೆಸೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ತಾ. ೭ ರಂದು ಬೆಳಿಗ್ಗೆ ೯.೩೦ ರಿಂದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಹಲಸಿನ ಮರ ಶ್ರೀಮತಿ ಗೌರಮ್ಮ ಶಾಂತಮಲ್ಲಪ್ಪ ಪದವಿ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ವಿದ್ಯಾಸಂಸ್ಥೆ ಅಧ್ಯಕ್ಷ ಹಾಗೂ ವಕೀಲ ಎಚ್.ಎಸ್.ಚಂದ್ರಮೌಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುತ್ತಾರೆ.ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸುತ್ತಾರೆ.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ತ್ಯಾಗರಾಜ್, ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಹನೀಫ್, ಬೆಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಮಲಮ್ಮ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಪುಟ್ಟರಾಜ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಸೌಮ್ಯಾ ಪೊನ್ನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜೇಶ್, ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಎಂ.ಹೇಮAತ್, ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಚ್.ಎನ್.ಮಂಜುನಾಥ್, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರತ್ನಕುಮಾರ್, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ಶಿಕ್ಷಣ ಸಂಯೋಜಕ ಎಚ್.ಆರ್.ಶೇಖರ್, ವಿದ್ಯಾಸಂಸ್ಥೆ ಗೌರವಾಧ್ಯಕ್ಷ ಎಸ್.ಎಸ್.ನಾಗರಾಜ್, ಉಪಾಧ್ಯಕ್ಷ ಸಿ.ವಿ.ಶಂಭುಲಿAಗಪ್ಪ, ಕಾರ್ಯದರ್ಶಿ ಪರಮೇಶ್, ಖಜಾಂಚಿ ಡಾ.ಉದಯಕುಮಾರ್, ನಿರ್ದೇಶಕರು, ಆಡಳಿತಾಧಿಕಾರಿ ಜಗದೀಶ್ ಬಾಬು, ಪ್ರಾಂಶುಪಾಲರು, ಸಿ.ಆರ್.ಪಿ. ಆರ್.ರವೀಶ್ ಪಾಲ್ಗೊಳ್ಳುತ್ತಾರೆ.

ಸಮಾರೋಪ ಕಾರ್ಯಕ್ರಮ : ಮಧ್ಯಾಹ್ನ ೩.೩೦ ರಿಂದ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎಸ್.ನಾಗರಾಜ್ ವಹಿಸುತ್ತಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಿಯು ಕಾಲೇಜ್ ಉಪನ್ಯಾಸಕರ ಸಂಘದ ಅಧ್ಯಕ್ಷ ಫಿಲಿಪ್ ವಾಸ್, ವಿದ್ಯಾಸಂಸ್ಥೆ ಉಪಾಧ್ಯಕ್ಷ ಶಂಭುಲಿAಗಪ್ಪ, ಪ್ರಾಂಶುಪಾಲರಾದ ನಿರಂಜನ್ ಮತ್ತು ಪವಾರ್, ಮುಖ್ಯಶಿಕ್ಷಕ ಎಂ.ಎಸ್.ಅಬ್ದುಲ್ ರಬ್, ಸಮೂಕ ಸಂಪನ್ಮೂಲ ವ್ಯಕ್ತಿಗಳಾದ ಆರ್.ರವೀಶ್ ಮತ್ತು ಜಾನ್ ಪಾಲ್ ಡಿಸೋಜ ಪಾಲ್ಗೊಳ್ಳಲಿದ್ದಾರೆ.