ಮಡಿಕೇರಿ, ಸೆ. ೬ : ಕೊಡಗು ಜಿಲ್ಲಾಡಳಿತ, ನೆಹರು ಯುವ ಕೇಂದ್ರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ವೀರಾಜಪೇಟೆ, ಮಡಿಕೇರಿ, ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ, ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವ ಉತ್ಸವವು ತಾ. ೮ ರಂದು ಬೆಳಗ್ಗೆ ೧೦ ಗಂಟೆಗೆ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ನೆಹರು ಯುವ ಕೇಂದ್ರ ಪ್ರಾದೇಶಿಕ ಸಂಘಟನೆಯ ರಾಜ್ಯ ನಿರ್ದೇಶಕರಾದ ಎಂ.ಎನ್.ನಟರಾಜ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಕೆ.ಟಿ.ಕೆ.ಉಲ್ಲಾಸ್, ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ.ಪಿ.ಸುಕುಮಾರ್, ವಿರಾಜಪೇಟೆ, ಸೋಮವಾರಪೇಟೆ, ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷರುಗಳು ಇತರರು ಪಾಲ್ಗೊಳ್ಳಲಿದ್ದಾರೆ. ರಾಜ್ಯ ಸರ್ಕಾರದಿಂದ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಪಡೆದವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.