ಸೋಮವಾರಪೇಟೆ, ಸೆ. ೬ : ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ತಾಲೂಕು ಒಕ್ಕಲಿಗರ ಸಂಘದ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಬಾಲಕಿಯರ ವಿಭಾಗದಲ್ಲಿ ಬಿಟಿಸಿಜಿ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ದ್ವಿತೀಯ ಸ್ಥಾನವನ್ನು ಮಾದಾಪುರ ಚನ್ನಮ್ಮ ಪದವಿ ಪೂರ್ವ ಕಾಲೇಜು ತಂಡ ಪಡೆಯಿತು. ಬಾಲಕರ ವಿಭಾಗದಲ್ಲಿ ಕುಶಾಲನಗರ ವಿವೇಕಾನಂದ ಕಾಲೇಜು ಪ್ರಥಮ ಹಾಗೂ ಮಾದಾಪುರ ಚನ್ನಮ್ಮ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು. ಬಿಟಿಸಿಜಿ ಕಾಲೇಜಿನ ಪ್ರಾಂಶುಪಾಲರಾದ ಮಿಲ್ಡೆçಡ್ ಗೋನ್ಸಾಲ್ವೆಸ್, ದೈಹಿಕ ಶಿಕ್ಷಣ ಶಿಕ್ಷಕರಾದ ರಂಗಸ್ವಾಮಿ, ಇಂದಿರಾ ಬಹುಮಾನ ವಿತರಿಸಿದರು. ಶಿಕ್ಷಕಿಯರಾದ ಸೌಮ್ಯ, ದಿವ್ಯ ಇದ್ದರು.