ಕುಶಾಲನಗರ, ಸೆ. ೭: ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟಿçÃಸ್ನ ಕುಶಾಲನಗರ ಸ್ಥಾನೀಯ ಸಮಿತಿಯ ಪದಾಧಿಕಾರಿಗಳು ಪಟ್ಟಣದಲ್ಲಿ ಆಗಬೇಕಾಗಿರುವ ಅಗತ್ಯ ಕೆಲಸಗಳ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ ಮಂಥರ್ ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕುಶಾಲನಗರ ಸ್ಥಾನೀಯ ಸಮಿತಿಯ ಅಧ್ಯಕ್ಷ ರವೀಂದ್ರ ರೈ ಅವರ ನೇತೃತ್ವದಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರು ಮನವಿ ಪತ್ರ ಸಲ್ಲಿಸಿದ್ದು, ಕುಶಾಲನಗರದ ಒಳಚರಂಡಿ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವುದು. ಪಟ್ಟಣದ ವಾಹನ ನಿಲುಗಡೆ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುವುದು, ಕೈಗಾರಿಕಾ ಬಡಾವಣೆಗೆ ಹೆಚ್ಚಿನ ಪ್ರದೇಶಗಳನ್ನು ಗುರುತಿಸುವುದು, ಪ್ರವಾಸೋದ್ಯಮ ಅಭಿವೃದ್ಧಿ ಹಿನ್ನೆಲೆಯಲ್ಲಿ ಕುಶಾಲನಗರ ಗಡಿಭಾಗದಲ್ಲಿ ಪ್ರವಾಸಿ ಮಾಹಿತಿ ಕೇಂದ್ರ ತೆರೆಯುವುದು, ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಹುದ್ದೆಯೊಂದಿಗೆ ಸಿಬ್ಬಂದಿಗಳ ನೇಮಕ ಹಾಗೂ ಪಟ್ಟಣದ ವ್ಯಾಪಾರಿಗಳು ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಮನವಿ ಪತ್ರದಲ್ಲಿ ಬೇಡಿಕೆ ಸಲ್ಲಿಸಲಾಯಿತು.