ಗೋಣಿಕೊಪ್ಪಲು, ಸೆ. ೭: ಗೋಣಿಕೊಪ್ಪ, ವೀರಾಜಪೇಟೆ ಮುಖ್ಯ ರಸ್ತೆಯ ಉಮಾಮಹೇಶ್ವರಿ ದೇವಾಲಯದ ಅನತಿ ದೂರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಸ್ಕೂಟರ್ ಸವಾರ ಗೋಣಿಕೊಪ್ಪ ಕಾವೇರಿ ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಕುಟ್ಟಪ್ಪ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಆಸ್ಪತ್ರೆಗೆ ರವಾನಿಸಲಾಗಿದೆ.
ಕಾಲೇಜು ಮುಗಿಸಿ ತನ್ನ ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ವೀರಾಜಪೇಟೆ ಕಡೆಯಿಂದ ಗೋಣಿಕೊಪ್ಪಕ್ಕೆ ಬರುತ್ತಿದ್ದ ಲಾರಿ ಡಿಕ್ಕಿಪಡಿಸಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಸಾರ್ವಜನಿಕರು ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಪ್ರಥಮ ಚಿಕಿತ್ಸೆ ನಂತರ ಈತನನ್ನು ಮಡಿಕೇರಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.