ಪರಿಶಿಷ್ಟ ಜಾತಿ ವರ್ಗಕ್ಕೆ ನ್ಯಾಯ ಒದಗಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆ. ೭: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವುದರÀ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ೩ ಗಂಟೆಗಳ ಕಾಲ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಬಳಿಕ ಅಧಿಕಾರಿ ವರ್ಗಕ್ಕೆ ಈ ಸೂಚನೆ ನೀಡಿದರು. ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ನ್ಯಾಯ ಒದಗಿಸಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣದಿಂದ ಎಸ್.ಸಿ/ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ, ನಾಗರಿಕ ಹಕ್ಕು ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಸರ್ಕಾರ ಈ ಕಾಯ್ದೆಗೆ ಹೆಚ್ಚಿನ ಮಹತ್ವ ನೀಡಿ ಗಂಭೀರವಾಗಿ ಪರಿಗಣಿಸುತ್ತದೆ. ಸಂತ್ರಸ್ತರಿಗೆ ರಕ್ಷಣೆ ಸಿಗಬೇಕು. ಈ ಉದ್ದೇಶ ಸಫಲವಾಗಲು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಪ್ರಾಸಿಕ್ಯೂಷನ್ ಇಲಾಖೆ, ಕಂದಾಯ ಇಲಾಖೆ ಸಮನ್ವಯದೊಂದಿಗೆ ಕೆಲಸ ಮಾಡಬೇಕು. ಪೊಲೀಸ್ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಎರಡು ತಿಂಗಳೊಳಗೆ ಚಾರ್ಜ್ ಶೀಟ್ ಹಾಕುವ ಬಗ್ಗೆ ಎಸ್.ಪಿ.ಗಳಿಗೆ, ಡಿಸಿಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಪೊಲೀಸರು ಜಾಗರೂಕತೆಯಿಂದ ತನಿಖೆ ಮಾಡಬೇಕು. ಇವುಗಳನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶಿಕ್ಷೆ ಕೊಡಿಸಲು ಎಲ್ಲ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು. ತಾಲೂಕು, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಲ್ಲಿ ಈ ವಿಷಯದ ಕುರಿತು ಕಡ್ಡಾಯವಾಗಿ ಪ್ರಗತಿ ಪರಿಶೀಲನೆ ಆಗಬೇಕು. ಚಾರ್ಜ್ ಶೀಟ್ ಸಲ್ಲಿಕೆಯನ್ನು ಯಾವುದೇ ಕಾರಣಕ್ಕೆ ವಿಳಂಬ ಮಾಡಬಾರದು. ಸಾಕ್ಷ್ಯ ವಿಫಲ ಆಗದಂತೆ ಪೊಲೀಸರು ಹೆಚ್ಚಿನ ಗಮನ ಕೊಡಬೇಕು. ರಾಜಕಾರಣಿಗಳು ಈ ದೌರ್ಜನ್ಯ ಪ್ರಕರಣಗಳಲ್ಲಿ ಮಧ್ಯ ಪ್ರವೇಶಿಸದೆ ಪೊಲೀಸರಿಗೆ ಸಹಕಾರ ನೀಡಬೇಕು. ಪ್ರತಿ ಪ್ರಕರಣ ದಾಖಲಿಸುವಾಗ ಪೊಲೀಸರು ತಮ್ಮ ವಿವೇಚನೆಯನ್ನು ಬಳಸಬೇಕು. ಚಾರ್ಜ್ ಶೀಟ್ ಸಲ್ಲಿಕೆ ವಿಳಂಬವಾದರೆ ಆರೋಪಿಗಳು ಜಾಮೀನು ಪಡೆದು ಹೊರಬಂದು ಮತ್ತೊಮ್ಮೆ ಅಪರಾಧ ಎಸಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದರು. ಮುಂದಿನ ಸಭೆಯಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳ ಅವಧಿ ಮತ್ತು ಇತರ ಮಾಹಿತಿಯನ್ನು ಒದಗಿಸಬೇಕು ಎಂದರು.

ಸುಪ್ರೀಂ ಕೋರ್ಟ್ನಲ್ಲೂ ಮಾಜಿ ಸಚಿವ ರಾಮದಾಸ್‌ಗೆ ಹಿನ್ನಡೆ

ನವದೆಹಲಿ, ಸೆ. ೭: ಈ ಹಿಂದೆ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪ್ರೇಮಕುಮಾರಿ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಹಿನ್ನಡೆಯಾಗಿದೆ. ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ಪ್ರೇಮಕುಮಾರಿ ಅವರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ರಾಮದಾಸ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ತನ್ನನ್ನು ಮದುವೆಯಾಗಿ ವಂಚಿಸಿದ್ದಾರೆAದು ಪ್ರೇಮಕುಮಾರಿ ಎನ್ನುವರು ರಾಮದಾಸ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರಾಮದಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರೆ ಹೈಕೋರ್ಟ್ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು. ನಂತರ ರಾಮದಾಸ್ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಸಹ ಮಾಜಿ ಸಚಿವರ ಅರ್ಜಿಯನ್ನು ತಿರಸ್ಕರಿಸಿದೆ.

ಬಸ್‌ನಲ್ಲಿದ್ದ ಎಐ ಕ್ಯಾಮರಾ ಸಹಾಯದಿಂದ ಕಳ್ಳನನ್ನು ಹಿಡಿದ ಪೊಲೀಸರು!

ಬೆಂಗಳೂರು, ಸೆ. ೭: ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನಕ್ಕೆ ಸಂಬAಧಿಸಿದAತೆ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಬಿಎಂಟಿಸಿ ಸಿಸಿಟಿವಿ ಕ್ಯಾಮೆರಾ ಸಹಾಯದಿಂದ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸಂಜಯನಗರದ ಪಟೇಲಪ್ಪ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ ೨೧೧ ಗ್ರಾಂ ಚಿನ್ನಾಭರಣ ಹಾಗೂ ೧೦ ಲಕ್ಷ ರೂ.ಗಳನ್ನು ಕಳ್ಳತನ ಮಾಡಿದ್ದ ೨೮ ವರ್ಷದ ಆರೋಪಿ ಜಾಲಹಳ್ಳಿ ನಿವಾಸಿ ಸುಬ್ರತಾ ಮೊಂಡಲ್ ಎಂಬಾತನನ್ನು ಬಂಧಿಸಲಾಗಿದೆ. ಮೊಂಡೋಲ್ ಹಲವು ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಈತನ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಮನೆ ಮಾಲೀಕ ರಾಮಯ್ಯ ಶೆಟ್ಟಿ ದೂರು ಸಲ್ಲಿಸಿದ್ದು, ಕುಟುಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಸ್ಟ್ ೨೭ ರಂದು ಮಧ್ಯಾಹ್ನದ ಸುಮಾರಿಗೆ ತಾವು ಮತ್ತು ತಮ್ಮ ಕುಟುಂಬದವರು ಹೊರಗೆ ಹೋಗಿದ್ದರು. ಎರಡು ಗಂಟೆಗಳಲ್ಲಿ ಹಿಂದಿರುಗಿದಾಗ, ಗೇಟ್ ತೆರೆದಿರುವುದನ್ನು ಕಂಡು ಬಂದಿದೆ. ಮನೆಯೊಳಗೆ ಹೋಗಿ ಪರಿಶೀಲಿಸಿದಾಗ ೧೦ ಲಕ್ಷ ರೂಪಾಯಿ ಹಾಗೂ ೨೧೧ ಗ್ರಾಂ ಚಿನ್ನಾಭರಣ ನಾಪತ್ತೆಯಾಗಿರುವುದು ಗೊತ್ತಾಗಿದೆ. ಸುಬ್ರತಾ ಮೊಂಡಲ್ ಕಳ್ಳತನ ಮಾಡಿದ ಬಳಿಕ ಬಿಎಂಟಿಸಿ ಬಸ್ ಹತ್ತಿದ್ದಾನೆ. ಬಿಎಂಟಿಸಿ ಬಸ್‌ಗಳಲ್ಲಿ ಅಳವಡಿಸಲಾಗಿರುವ ಎಐ ಆಧಾರಿತ ಕ್ಯಾಮೆರಾ ವ್ಯವಸ್ಥೆಯಾದ ನೇತ್ರಾ ಸಾಧನವನ್ನು ಬಳಸಿಕೊಂಡು ಪೊಲೀಸರು ಆತನನ್ನು ಪತ್ತೆಹಚ್ಚಿದ್ದಾರೆ. ಈ ಸಾಧನವು ೨ಕ್ಯಾಮೆರಾ ಮೂಲಕ, ಟ್ರ‍್ಯಾಕಿಂಗ್ ಉದ್ದೇಶಗಳಿಗಾಗಿ ನಂಬರ್ ಪ್ಲೇಟ್‌ಗಳು ಮತ್ತು ಚಾಲಕನ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತದೆ. ಕ್ಯಾಮರಾ ದೃಶ್ಯಾವಳಿಗಳನ್ನು ಬಳಸಿ, ಪೊಲೀಸರು ಬಸ್ ಸಂಖ್ಯೆಯನ್ನು ಗುರುತಿಸಿ ಶಂಕಿತನನ್ನು ಪತ್ತೆಹಚ್ಚಿದರು. ವಿಚಾರಣೆ ವೇಳೆ ಆರೋಪಿ ತಾನು ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾನೆ.

೧೨ ಅಂಶಗಳ ಪ್ರಸ್ತಾವನೆ ಮಂಡಿಸಿದ ಪ್ರಧಾನಿ ಮೋದಿ

ಜಕಾರ್ತಾ, ಸೆ. ೭: ಡಿಜಿಟಲ್ ಪರಿವರ್ತನೆ, ವ್ಯಾಪಾರ ಮತ್ತು ಆರ್ಥಿಕ ತೊಡಗಿಸಿಕೊಳ್ಳುವಿಕೆಯಂತಹ ಕ್ಷೇತ್ರಗಳಲ್ಲಿ ಭಾರತ-ಆಸಿಯಾನ್ ಸಹಕಾರವನ್ನು ಬಲಪಡಿಸುವ ೧೨ ಅಂಶಗಳ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಂಡಿಸಿದರು. ಇಂಡೋನೇಷ್ಯಾ ರಾಜಧಾನಿ ಜಕಾರ್ತಾದಲ್ಲಿ ನಡೆದ ೨೦ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಆಸಿಯಾನ್‌ನ ಪ್ರಧಾನ ಕಾರ್ಯದರ್ಶಿ(ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ) ಡಾ ಕಾವೊ ಕಿಮ್ ಹರ್ನ್ ಕೂಡ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಶೃಂಗಸಭೆಯಲ್ಲಿ ಎರಡು ಜಂಟಿ ಹೇಳಿಕೆಗಳು - ಒಂದು ಕಡಲ ಸಹಕಾರ ಮತ್ತು ಇನ್ನೊಂದು ಆಹಾರ ಭದ್ರತೆಯ ಬಗ್ಗೆ ನಿರ್ಣಯ ಅಂಗೀಕರಿಸಲಾಯಿತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ(ಒಇಂ) ಪ್ರಕಟಣೆಯಲ್ಲಿ ತಿಳಿಸಿದೆ. ಶೃಂಗಸಭೆಯಲ್ಲಿ, ಆಸಿಯಾನ್-ಭಾರತದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಅದರ ಭವಿಷ್ಯದ ಕೋರ್ಸ್ ಅನ್ನು ರೂಪಿಸುವ ಕುರಿತು ಆಸಿಯಾನ್ ಪಾಲುದಾರರೊಂದಿಗೆ ಪ್ರಧಾನಿ ಮೋದಿ ವ್ಯಾಪಕ ಚರ್ಚೆ ನಡೆಸಿದರು ಎಂದು ಪ್ರಕಟಣೆ ತಿಳಿಸಿದೆ.