ಮಡಿಕೇರಿ, ಸೆ. ೭: ವೀರಾಜಪೇಟೆ ವಿಭಾಗ, ವಲಯ ಹಾಗೂ ಶಾಖೆ ಮತ್ತು ಅಮ್ಮತ್ತಿ ಶಾಖೆಗೆ ಒಳಪಡುವ ಗ್ರಾಮದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು ಹಲವು ದಿನಗಳಿಂದ ಅಲ್ಲಿನ ಗ್ರಾಮಸ್ಥರ ಗದ್ದೆ ಹಾಗೂ ತೋಟಗಳಿಗೆ ಲಗ್ಗೆಯಿಟ್ಟು ನಷ್ಟವುಂಟುಮಾಡುತ್ತಿರುವುದರಿAದ ಚಂಬೆಬೆಳ್ಳೂರು ಗ್ರಾಮ ಪಂಚಾಯಿತಿ ಹಾಗೂ ಗ್ರಾಮಸ್ಥರ ಮನವಿಯ ಮೇರೆಗೆ ಕುಕ್ಲೂರು, ಐಮಂಗಲ, ಪುದುಕೋಟೆ, ದೇವಣಗೇರಿ, ಚಂಬೆಬೆಳ್ಳೂರು, ಕಾವಾಡಿ, ಕಣ್ಣಂಗಾಲ, ಬೆಳ್ಳರಿಮಾಡು, ಮೈತಾಡಿ, ಚಾಮಿಯಾಲ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ತಾ. ೮ರಿಂದ (ಇಂದಿನಿAದ) ಕಾಡಿಗೆ ಓಡಿಸುವ ಕಾರ್ಯಾಚರಣೆ ನಡೆಸಲಾಗುತ್ತದೆ. ಆದ್ದರಿಂದ ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕು. ಅಲ್ಲದೆ, ಆ ಸಮಯದಲ್ಲಿ ಸಾರ್ವಜನಿಕರು ಪಟಾಕಿಗಳನ್ನು ಸಿಡಿಸಬಾರದು ಎಂದು ವಲಯ ಅರಣ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.