ಮಡಿಕೇರಿ, ಸೆ. ೭ : ಕನ್ನಡ ಸಾಹಿತ್ಯ ಪರಿಷತ್ತಿನ ಕುಶಾಲನಗರ ತಾಲೂಕು ಘಟಕದ ಪದಗ್ರಹಣ ಸಮಾರಂಭವು ತಾ. ೧೦ ರಂದು ಕುಶಾಲನಗರದಲ್ಲಿ ನಡೆಯಲಿದೆ ಎಂದು ಘಟಕದ ನಿಯೋಜಿತ ಅಧ್ಯಕ್ಷ ಕೆ.ಎಸ್. ನಾಗೇಶ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ ೩ ಗಂಟೆಗೆ ಕುಶಾಲನಗರದ ಕಲಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥÀರ್ ಗೌಡ, ಮತ್ತಿತರರು ಪಾಲ್ಗೊಳ್ಳದ್ದಾರೆ.

ಸಭಾ ಕಾರ್ಯಕ್ರಮಕ್ಕೂ ಮೊದಲು ಕೊಪ್ಪಗೇಟ್ ಬಳಿಯಿಂದ ಯದುವೀರ್ ಒಡೆಯರ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಗು ವುದು. ಅಲ್ಲಿಂದ ಕಲಾ ಭವನದವರೆಗೆ ಮೆರವಣಿಗೆ ಮೂಲಕ ವೇದಿಕೆಗೆ ಕರೆ ತರಲಾಗುವುದು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಕುಶಾಲನಗರ ಕಲಾ ಭವನದ ಕಾಮಗಾರಿ ಅಪೂರ್ಣ ಗೊಂಡಿದ್ದು, ಈಗಾಗಲೇ ಶಾಸಕ ಡಾ.ಮಂಥರ್ ಗೌಡ ಅವರ ಗಮನ ಸೆಳೆಯಲಾಗಿದೆ. ಕಟ್ಟಡ ಪೂರ್ಣಗೊಂಡ ನಂತರ ಮುಂದಿನ ದಿನಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಅಲ್ಲೇ ನಡೆಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮ್ಮದ್, ಕುಶಾಲನಗರ ತಾಲೂಕು ಘಟಕದ ನಿರ್ದೇಶಕರುಗಳಾದ ಡಿ.ವಿ.ರಾಜೇಶ್ ಹಾಗೂ ಸೋಮಣ್ಣ ಉಪಸ್ಥಿತರಿದ್ದರು.