ಮಡಿಕೇರಿ, ಸೆ. ೭ : ಶ್ರೀ ಕಂಚಿ ಕಾಮಾಕ್ಷಿ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾ. ೧೦ ರಂದು ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ನಡೆಯಲಿದೆ. ಅಂದು ಸಂಜೆ ೪ ಗಂಟೆಗೆ ದೇವಾಲಯದ ಆವರಣದಲ್ಲಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಹಾಗೂ ೫ ವರ್ಷದೊಳಗಿನ ಮಕ್ಕಳಿಗೆ ಛದ್ಮ ವೇಷ ಸ್ಪರ್ಧೆ ಏರ್ಪಡಿಸಲಾಗಿದೆ.

ಛದ್ಮ ವೇಷ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳು ದೂರವಾಣಿ ಸಂಖ್ಯೆ ೯೪೮೨೦೩೭೫೨೫, ೯೪೪೯೬೯೬೩೫೫ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.