ಮಡಿಕೇರಿ, ಸೆ.೮ : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ತಾ. ೧೦ ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೨ನೇ ಜಯಂತಿಯನ್ನು ಆಚರಿಸಲಾಗುವುದು.

ಅಂದು ಬೆಳಗ್ಗೆ ೧೧ ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಹೆಚ್.ವಿ. ದೇವದಾಸ್ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಕೊಡಗು ವೈದ್ಯಕೀಯ ವಿಭಾಗ ಸಂಸ್ಥೆ ಮತ್ತು ಭೋದಕ ಆಸ್ಪತ್ರೆಯ ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್ ಪಾಲ್ಗೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸ್ತಿçÃರೋಗ ತಜ್ಞೆ ಡಾ.ಸೌಮ್ಯ ಪ್ರಕಾಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಹೆಚ್.ಎ.ಮೋಹನ್ ಸೇರಿದಂತೆ ಸಂಘಟನೆ ಪ್ರಮುಖರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಅಲ್ಲದೆ ನಗರದ ಸ್ತಿçà ಶಕ್ತಿ ವೃದ್ಧಾಶ್ರಮದ ಸಂಧ್ಯಾಕಾಲದ ಬಂಧುಗಳಿಗೆ ಬಟ್ಟೆ ಹಾಗೂ ನಗರಸಭೆಯ ೭೦ ಮಂದಿ ಪೌರ ಕಾರ್ಮಿಕರಿಗೆ ಸ್ವೆಟರ್ ವಿತರಿಸಲಾಗುವುದು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.