ಮಡಿಕೇರಿ, ಸೆ. ೮: ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ನಗರದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ವಿಧಾನ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೇವಲ ವರ್ಗಾವಣೆ ದಂಧೆ ನಡೆಯುತ್ತಿದೆ ಹೊರತು, ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು. ಐದು ಗ್ಯಾರಂಟಿಗಳನ್ನು ಮುಂದಿಟ್ಟುಕೊAಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸದೆ ಗೊಂದಲ ಸೃಷ್ಟಿಸುತ್ತಾ ಕಾಲಹರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಸಂಬAಧಿಸಿದAತೆ ಅನುದಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡದೆ; ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಆರೋಪ ಮಾಡುತ್ತಾ, ಕಾಂಗ್ರೆಸ್ ಸರ್ಕಾರ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿAದ ರಾಜ್ಯದಲ್ಲಿ ಬರಗಾಲ ಆವರಿಸಿದೆ. ರೈತರಿಗಾಗಿ ಹಾಗೂ ರೈತರ ಮಕ್ಕಳಿಗಾಗಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಹಲವಾರು ಯೋಜನೆಗಳನ್ನು ರದ್ದುಮಾಡುವ ಮೂಲಕ ಕಾಂಗ್ರೆಸ್ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಬಿಜೆಪಿ ಸರ್ಕಾರ ರೈತರ ಹಾಗೂ ನಾಡಿನ ಒಳಿತಿಗಾಗಿ ಜಾರಿಮಾಡಿದ್ದ ಹಲವಾರು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡುವ ಮೂಲಕ ಜನವಿರೋಧಿ ಆಡಳಿತ ನಡೆಸುತ್ತಿದೆ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪಾಡಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಜೀವವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ರವಿಕಾಳಪ್ಪ, ನಗರಸಭಾ ಅಧ್ಯಕ್ಷೆ ಅನಿತಾಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ವಿಧಾನಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್ ಮತ್ತಿತರರು ಇದ್ದರು. ತಹಶೀಲ್ದಾರ್ ಪ್ರವೀಣ್ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.