ಮಡಿಕೇರಿ, ಸೆ. ೮: ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ವಾರ್ಷಿಕೋತ್ಸವ ಡಿ.ಸಿ.ಸಿ ಹಿರಿಯ ಉಪಾಧ್ಯಕ್ಷ ಕೆ.ಎಂ.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಡಿ.ಸಿ.ಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ಎಂ.ಲೋಕೇಶ್ ಕನ್ಯಾಕುಮಾರಿ ಯಿಂದ ಕಾಶ್ಮೀರದ ವರೆಗೆ ೧೫೦ ದಿನಗಳ ಕಾಲ ನಡೆದ ಈ ಯಾತ್ರೆ ಕರ್ನಾಟಕದಲ್ಲಿ ಹಾದು ಹೋದ ಪರಿಣಾಮವಾಗಿ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಧಿಕ ಬಹುಮತ ಪಡೆಯಲು ಸಾಧ್ಯವಾಯಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್‌ಯಲ್ಲಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಭಾರತ್ ಜೋಡೋ ಯಾತ್ರೆಯ ಮೂಲಕ ದೇಶದೆಲ್ಲೆಡೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ನೀಡಿದ್ದಾರೆ ಎಂದು ಹೇಳಿದರು.

ಡಿ.ಸಿ.ಸಿ. ಉಪಾಧ್ಯಕ್ಷ ಕೊಕ್ಕಲೆರ ಸುಜು ತಿಮ್ಮಯ್ಯ ಮಾತನಾಡಿ ಭಾರತ್ ಜೋಡೋ ಯಾತ್ರೆಯ ಮೂಲಕ ರಾಹುಲ್ ಗಾಂಧಿ ದೇಶದ ಜನರ ಮನಸ್ಸನ್ನು ಗೆದ್ದಿದ್ದಾರೆ ಎಂದು ತಿಳಿಸಿದ್ದಾರೆ. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ ಸಾಮಾಜಿಕವಾಗಿ, ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಮೂಲಕ ದೇಶದಲ್ಲಿ ಒಡೆದ ಮನಸ್ಸುಗಳನ್ನು ಒಂದು ಮಾಡಿದರು ಎಂದು ನುಡಿದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ,

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಿಂದ ಭಾರತ ಸುಭದ್ರಗೊಂಡಿದೆ ಎಂದರು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಮಾತನಾಡಿ, ರಾಹುಲ್ ಗಾಂಧಿ ಭಾರತವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುವಲ್ಲಿ ಶ್ರಮಿಸುತ್ತಿದ್ದಾರೆ ಎಂದರು. ನಂತರ ಮುಖಂಡರು, ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಚೌಕಿ, ಅಜ್ಜಮಾಡ ದೇವಯ್ಯ ವೃತ್ತ, ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಗಾಂಧಿ ಮೈದಾನದವರೆಗೆ ಮೆರವಣಿಗೆ ನಡೆಸಿದರು.

ಕೆಪಿಸಿಸಿ ಮುಖಂಡರಾದ ಕೆ.ಪಿ.ಚಂದ್ರಕಲಾ, ಟಿ.ಪಿ.ರಮೇಶ್, ಹೆಚ್.ಎಂ.ನAದಕುಮಾರ್,ಮAಜುನಾಥ್ ಗುಂಡೂ ರಾವ್, ಬೇಕಲ್ ರಮಾನಾಥ್, ಪ್ರಮುಖರಾದ ಮುನೀರ್ ಅಹಮದ್, ವಿ.ಪಿ.ಸುರೇಶ್, ಬ್ಲಾಕ್ ಅಧ್ಯಕ್ಷರಾದ ಬಿ.ಬಿ.ಸತೀಶ್, ಮೀದೇರಿರ ನವೀನ್, ನಗರ ಕಾಂಗ್ರೆಸ್ ಉಪಾಧ್ಯಕ್ಷ ಮಂಡಿರ ಸದಾ ಮುದ್ದಪ್ಪ ಸೇರಿದಂತೆ ನೂರಾರು ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.