ವೀರಾಜಪೇಟೆ, ಸೆ. ೮: ಯುವಜನತೆ ರಾಷ್ಟçದ ಬಹುದೊಡ್ಡ ಶಕ್ತಿ. ಯುವಜನರು ತಮ್ಮ ಆಸಕ್ತಿಯನ್ನು ದೇಶದ ಅಭಿವೃದ್ಧಿಯಲ್ಲಿ ತೋರಿಸಿ ದಾಗ ಮಾತ್ರ ದೇಶವು ಮುಂದುವರಿದ ರಾಷ್ಟçಗಳ ಸಾಲಿನಲ್ಲಿ ನಿಲ್ಲಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅಭಿಮತ ವ್ಯಕ್ತಪಡಿಸಿದರು.

ಕೊಡಗು ಜಿಲ್ಲಾಡಳಿತ, ನೆಹರು ಯುವ ಕೇಂದ್ರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ವೀರಾಜ ಪೇಟೆ, ಮಡಿಕೇರಿ, ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ, ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಉತ್ಸವವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಶಾಸಕ ಪೊನ್ನಣ್ಣ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯುವಕರ ಅಭಿವೃದ್ಧಿಗಾಗಿ ಅನೇಕ ಯೋಜನೆ ಗಳನ್ನು ಜಾರಿಗೊಳಿಸಿವೆ. ವಿದ್ಯಾರ್ಥಿ ಗಳು ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಬೇಕು. ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗ ಬೇಕು. ನಾವು ಓದುಲು ಬಂದಿದ್ದೇನೆ ಓದಬೇಕು ಎನ್ನುವ ಪ್ರಜ್ಞೆಯೊಂದಿಗೆ ನಿರಂತರ ಅಧ್ಯಯನ ನಡೆಸಿದಲ್ಲಿ ಯಶಸ್ಸಿನ ದಾರಿ ಸುಗಮವಾಗಲಿದೆ. ಯಾವುದೇ ದೇಶವು ಮುಂದುವರಿಯಲು ಶಿಕ್ಷಣ ಮುಖ್ಯ ಪಾತ್ರ ವಹಿಸುತ್ತದೆ. ಮೌಲ್ಯಯುತ ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದರು.

ನೆಹರು ಯುವ ಕೇಂದ್ರ ಪ್ರಾದೇಶಿಕ ಸಂಘಟನೆಯ ರಾಜ್ಯ ನಿರ್ದೇಶಕ ಎಂದರು. ಯುವಜನತೆಗಾಗಿ ಅನೇಕ ರೀತಿಯ ಉತ್ತಮ ಕಾರ್ಯಕ್ರಮಗಳ ನಿರ್ವಹಣೆ ಮಾಡುತ್ತಾ ಯುವ ಜನತೆಗೆ ಪ್ರೇರಣೆಯಾಗಿ ನೆಹರು ಯುವ ಕೇಂದ್ರ ಕೆಲಸ ಮಾಡುತ್ತಿದೆ. ಶತಮಾನೋತ್ಸವದ ಅಂಗವಾಗಿ ಐದು ಅಂಶಗಳ ಕಾರ್ಯಕ್ರಮವನ್ನು ಆಯೋಜಿಸಿ ವಿವಿಧ ರೀತಿಯ ಸ್ಪರ್ಧೆಗಳನ್ನು ನಡೆಸಿ ಜಿಲ್ಲಾಮಟ್ಟದಲ್ಲಿ ಆಯ್ಕೆಯಾದವರನ್ನು ರಾಜ್ಯಮಟ್ಟಕ್ಕೆ, ರಾಜ್ಯಮಟ್ಟದಲ್ಲಿ ಆಯ್ಕೆಯಾದವರನ್ನು ರಾಷ್ಟçಮಟ್ಟಕ್ಕೂ ಆಯ್ಕೆ ಮಾಡಲಾಗುವುದು ಎಂದರು. ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೇದಿಕೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾದ ವಿ.ಟಿ.ವಿಸ್ಮಯಿ, ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ಕೆ.ಟಿ.ಕೆ.ಉಲ್ಲಾಸ್, ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ವೀರಾಜಪೇಟೆ ಯುವ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಶೀಲಾ ಬೋಪಣ್ಣ, ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಲಾಡಿ ದಿಲೀಪ್ ಕುಮಾರ್, ಜಿಲ್ಲಾ ಯುವ ಒಕ್ಕೂಟದ ಮಾಜಿ ಅಧ್ಯಕ್ಷರುಗಳಾದ ಎ.ಎಸ್. ಟಾಟು ಮೊಣ್ಣಪ್ಪ, ಎನ್. ಎಸ್ ಕಂದಾ ದೇವಯ್ಯ, ತಾಲೂಕು ಯುವ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರಮೋದ್ ಗಣಪತಿ ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದಿಂದ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಪಡೆದಿರುವ ಎ.ಎಸ್.ಟಾಟು ಮೊಣ್ಣಪ್ಪ, ಪಿ.ಪಿ.ಸುಕುಮಾರ್ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ರಾಷ್ಟಿçÃಯ ಏಕತೆ ಮತ್ತು ಒಗ್ಗಟ್ಟು ಕುರಿತು ಯುವ ಉತ್ಸವ ಕಾರ್ಯಕ್ರಮದ ಯುವ ಚಿತ್ರಕಲಾ ಸ್ಪರ್ಧೆ, ಕವನ ಸ್ಪರ್ಧೆ, ಛಾಯಾಗ್ರಹಣ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ಸಾಮೂಹಿಕ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಉಪನ್ಯಾಸಕ ವೃಂದದವರು, ನೆಹರು ಯುವ ಕೇಂದ್ರದ ಯುವ ಕಾರ್ಯ ಕರ್ತರುಗಳು ಪಾಲ್ಗೊಂಡಿ ದ್ದರು. ಜಿಲ್ಲಾ ಯುವ ಒಕ್ಕೂಟದ ಕೂಡಂಡ ಸಾಬ ಸುಬ್ರಮಣಿ, ಉಪನ್ಯಾಸಕರಾದ ಆರ್ ರಘುರಾಜ್ ನಿರೂಪಿಸಿದರೆ, ಉಪನ್ಯಾಸಕ ಬಸವರಾಜು ವಂದಿಸಿದರು. ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕುಮಾರ್ ಸ್ವಾಗತಿಸಿದರು.