ಮಡಿಕೇರಿ, ಸೆ.೮ : ಕರ್ನಾಟಕ ಲೋಕಾಯುಕ್ತದ ಕೊಡಗು ಜಿಲ್ಲೆಯ ಅಧಿಕಾರಿಗಳು ತಾ. ೧೩ ರಂದು ಕುಶಾಲನಗರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ತಾ. ೧೫ ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ ೧೧ ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಯನ್ನು ಸ್ವೀಕರಿಸಲಾಗುವುದು.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ.

ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿಯ ದೂ.ಸಂ.೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.