ಮಡಿಕೇರಿ, ಸೆ. ೯: ೨೦೨೧-೨೨ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಕೇಂದ್ರ

ಸಹಕಾರ ಬ್ಯಾಂಕ್ (ಡಿಸಿಸಿ)ಗೆ ರಾಜ್ಯ ಅಪೆಕ್ಸ್ ಬ್ಯಾಂಕ್‌ನಿAದ ಪ್ರಶಸ್ತಿಯೊಂದಿಗೆ ಬಹುಮಾನ ನೀಡಲಾಗಿದೆ.

ಅಪೆಕ್ಸ್ ಬ್ಯಾಂಕ್‌ನ ಬಹುಮಾನ ಯೋಜನೆಯನ್ವಯ ಲೆಕ್ಕ ಪರಿಶೋಧನಾ ವರ್ಗೀಕರಣ ‘ಎ’ ವರ್ಗದಲ್ಲಿ ವಿಶೇಷ ಪ್ರಶಸ್ತಿಯೊಂದಿಗೆ ರೂ. ೨ ಲಕ್ಷ ಗಳನ್ನು ಬಹುಮಾನವಾಗಿ ನೀಡಲಾಗಿದೆ.

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಪರವಾಗಿ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ, ನಿರ್ದೇಶಕರಾದ ಹೊಟ್ಟೆಂಗಡ ರಮೇಶ್, ಅಪೆಕ್ಸ್ ಬ್ಯಾಂಕ್‌ಗೆ ಪ್ರತಿನಿಧಿಯಾಗಿರುವ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷ ಎಂ.ಬಿ. ದೇವಯ್ಯ ಅವರುಗಳು ಸನ್ಮಾನ ಸ್ವೀಕರಿಸಿದರು.