ಸೋಮವಾರಪೇಟೆ, ಸೆ. ೯: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ತಾಲೂಕು ರೈತ ಮೋರ್ಚಾ ನೇತೃತ್ವದಲ್ಲಿ ತಾ.೧೧ರಂದು (ನಾಳೆ) ಸೋಮವಾರಪೇಟೆ ಪಟ್ಟಣದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ರೈತ ಮೋರ್ಚಾ ತಾಲೂಕು ಅಧ್ಯಕ್ಷ ಮಚ್ಚಂಡ ಪ್ರಕಾಶ್ ಬೆಳ್ಳಿಯಪ್ಪ ತಿಳಿಸಿದ್ದಾರೆ. ತಾ. ೧೧ರಂದು ಬೆಳಿಗ್ಗೆ ೧೧ ಗಂಟೆಯಿAದ ತಹಶೀಲ್ದಾರರ ಕಚೇರಿಯ ಮುಂಭಾಗದಲ್ಲಿ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಾಶ್ ತಿಳಿಸಿದ್ದಾರೆ.