ಮಡಿಕೇರಿ, ಸೆ. ೯: ಮಡಿಕೇರಿ ದಸರಾ ಸಂಬAಧ ತಾ.೧೧ ರಂದು ಬೆಳಿಗ್ಗೆ ೧೦ ಗಂಟೆಗೆ ಸಾಂಪ್ರದಾಯದAತೆ ನಗರದ ಪೇಟೆ ಶ್ರೀರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿ, ಮಧ್ಯಾಹ್ನ ೩ ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಮಡಿಕೇರಿ ದಸರಾ ಸಮಿತಿಯ ಅಧ್ಯಕ್ಷರು ಹಾಗೂ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ವೈ.ರಾಜೇಶ್ ಯಲ್ಲಪ್ಪ ತಿಳಿಸಿದ್ದಾರೆ.