ಶನಿವಾರಸಂತೆ, ಸೆ. ೯: ಪಟ್ಟಣದ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ೨೦೨೨-೨೩ನೇ ಸಾಲಿನ ವಾರ್ಷಿಕ ಮಹಾಸಭೆ ತಾ.೧೭ ರಂದು ಬೆಳಿಗ್ಗೆ ೧೦.೩೦ಕ್ಕೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ.

ಸಂಘದ ಅಧ್ಯಕ್ಷ ಜಿ.ಜಿ.ಪರಮೇಶ್ ಮಹಾಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಪಿ.ಶಿವರಾಜ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.