ಮಡಿಕೇರಿ, ಸೆ. ೯ : ಪ್ರಸಕ್ತ (೨೦೨೩-೨೪) ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಕೃಷಿ ಹಾಗೂ ಕೃಷಿ ಸಂಬAಧಿತ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುತ್ತಿರುವ ರೈತರಿಗೆ ವಿತರಿಸಲಾಗುವುದು.
ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಆಯ್ಕೆಯಾದ ಜಿಲ್ಲೆಯ ೧೦ ರೈತರಿಗೆ ತಲಾ ರೂ. ೨೫ ಸಾವಿರ ಹಾಗೂ ತಾಲೂಕು ಮಟ್ಟದ ಪ್ರಶಸ್ತಿಯನ್ನು ಆಯಾಯ ತಾಲೂಕಿನ ೫ ರೈತರಿಗೆ ತಲಾ ೧೦ ಸಾವಿರ ರೂ.ವನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ತೀರ್ಮಾನದಂತೆ ವಿತರಿಸಲಾಗುವುದು.
ಪ್ರಶಸ್ತಿಗೆ ರೈತರು ಭಾಗವಹಿಸಬಹುದಾದ ಕೃಷಿ ಮತ್ತು ಕೃಷಿ ಸಂಬAಧಿತ ಚಟುವಟಿಕೆಗಳಾದ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ದಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಹಸಿರು ಮನೆ, ಕಸಿ ಅಭಿವೃದ್ದಿ ಸಸ್ಯಕಾಶಿ, ಕೃಷಿ ಸಂಸ್ಕರಣೆ ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅರ್ಹ ಆಸಕ್ತ ರೈತರು ಅರ್ಜಿಯನ್ನು ಆಯಾಯ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿ ಅರ್ಜಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸೆಪ್ಟೆಂಬರ್, ೩೦ ರ ಸಂಜೆ ೫ ಗಂಟೆ ಒಳಗೆ ಸಲ್ಲಿಸಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.