ವೀರಾಜಪೇಟೆ, ಸೆ. ೯: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ವೀರಾಜಪೇಟೆಯ ಸಂತ ಅನ್ನಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ.

ಈ ತಂಡ ಮಂಗಳೂರಿನಲ್ಲಿ ನಡೆಯಲಿರುವ ಮುಂದಿನ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ತಂಡದವರಿಗೆ ದೈಹಿಕ ಶಿಕ್ಷಕರಾದ ಅಂತೋಣಿ, ಶಿನಿ ಅವರು ತರಬೇತಿ ನೀಡಿದ್ದಾರೆ.