ಪೊನ್ನಂಪೇಟೆ, ಸೆ. ೧೦: ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು, ಶಾಂತಿ ಸಹ ಬಾಳ್ವೆಯಿಂದ ಕೂಡಿದ, ಆರೋಗ್ಯ ವಂತ ಸಮಾಜ ನಿರ್ಮಾಣ ಕಾರ್ಯದಲ್ಲಿ ಯುವಜನತೆ ತಮ್ಮನ್ನ ತೊಡಗಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಎನ್.ಎಸ್.ಎಸ್. ಅಧಿಕಾರಿ ಪ್ರತಾಪ್ ಲಿಂಗಯ್ಯ ಕರೆ ನೀಡಿದರು. ಗೋಣಿಕೊಪ್ಪಲು ಕಾವೇರಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ರಾಷ್ಟಿçÃಯ ಸೇವಾ ಯೋಜನೆ ವಿದ್ಯಾ ರ್ಥಿಗಳಲ್ಲಿ ದೇಶಭಕ್ತಿ, ಸಮಾನತೆ, ಭಾವೈಕ್ಯತೆಯನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆ, ಶಿಸ್ತು, ಸಂಯಮ, ಸಮಯ ಪ್ರಜ್ಞೆಯನ್ನೂ ಕಲಿಸಿಕೊ ಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಪ್ರೊ. ಇಟ್ಟೀರ ಕೆ. ಬಿದ್ದಪ್ಪ ಮಾತನಾಡಿ, ಎನ್.ಎಸ್.ಎಸ್ ವಿದ್ಯಾರ್ಥಿಗಳು ಪಾಠದ ಜೊತೆಗೆ ತಮ್ಮನ್ನು ಸೇವೆಯಲ್ಲಿ ತೊಡಗಿಸಿಕೊಂಡು ಜೀವನ ಸಾರ್ಥಕ ಪಡಿಸಿಕೊಳ್ಳಬೇಕು. ಕಠಿಣ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸುವ ಕಲೆಗಾರಿಕೆಯನ್ನು ಎನ್.ಎಸ್.ಎಸ್. ಕಲಿಸುತ್ತದೆ ಎಂದರು.
ಮೈಸೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್. ಸಂಯೋಜನಾ ಧಿಕಾರಿ ಡಾ. ಸುರೇಶ್ ಮಾತನಾಡಿ, ಎನ್.ಎಸ್.ಎಸ್.ನ ಮಹತ್ವ ಮತ್ತು ಉದ್ದೇಶಗಳ ಬಗ್ಗೆ ಮಾಹಿತಿ ನೀಡಿ ದರು. ಬೇಗೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಹಾಗೂ ಟಿ. ಶೆಟ್ಟಿಗೇರಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಎನ್.ಸಿ. ಅನಿತಾಕುಮಾರಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಕಾವೇರಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟಿçÃಯ ಸೇವಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಉತ್ತಮ ನಾಯಕತ್ವ ಗುಣವನ್ನು ಬೆಳೆಸಿ ಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭ ಎನ್.ಎಸ್.ಎಸ್. ಅಧಿಕಾರಿ ಎಂ.ಎನ್. ವನಿತ್ ಕುಮಾರ್ ಪ್ರಾಸ್ತಾವಿಕ ಮಾತನಾ ಡಿದರು. ಎನ್.ಪಿ.ರೀತಾ ಎನ್.ಎಸ್.ಎಸ್. ಘಟಕದ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದ ನೆನಪಿಗಾಗಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಲೇಜು ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ಫ್ಲೋರಿಯ ತಂಡ ಪ್ರಾರ್ಥಿಸಿ, ವನಿತ್ ಕುಮಾರ್ ಸ್ವಾಗತಿಸಿ, ದರ್ಶನ್ ವಂದಿಸಿ, ವೈ.ಸಿ. ವೇಣು ಮತ್ತು ಕೆ.ಎ. ಧನ್ಯ ನಿರೂಪಿಸಿದರು.