ಕುಶಾಲನಗರ, ಸೆ. ೧೦ : ಸಮಾಜದ ತಳಮಟ್ಟದ ಜನರನ್ನು ಸಮಾಜದ ಮುಖ್ಯ ವಾಹಿನಿಗೆ ಸೇರಿಸುವಲ್ಲಿ ಸಂಘ ಸಂಸ್ಥೆಗಳು ಕಾರ್ಯಯೋಜನೆಗಳನ್ನು ರೂಪಿಸಬೇಕಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಕರೆ ನೀಡಿದರು.

ಅವರು ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸಹಯೋಗದೊಂದಿಗೆ ವಲಯಮಟ್ಟದ ಸಾಮೂಹಿಕ ಶ್ರೀ ವರಮಹಾಲಕ್ಷಿö್ಮ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಧರ್ಮಸ್ಥಳ ಯೋಜನೆಯ ಮೂಲಕ ಮಹಿಳೆಯರಿಗೆ ಹಣಕಾಸಿನ ವ್ಯವಸ್ಥೆಯ ಶಿಸ್ತು ಮತ್ತು ಸೌಲಭ್ಯಗಳನ್ನು ಒದಗಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಧಾರ್ಮಿಕ ಕೇಂದ್ರಗಳಲ್ಲಿ ಶಾಂತಿ ನೆಮ್ಮದಿ ಲಭಿಸುತ್ತದೆ. ಶ್ರೀ ಕ್ಷೇತ್ರದ ಮೂಲಕ ಮಹಿಳೆಯರ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿರುವುದು ಶ್ಲಾಘನಾರ್ಹ ಎಂದರು. ಸರ್ಕಾರದ ಯೋಜನೆಗಳನ್ನು ಪ್ರತಿ ಮಹಿಳೆಯರಿಗೆ ತಲುಪುವಂತೆ ಮಾಡುವಲ್ಲಿ ಕೈಜೋಡಿಸಬೇಕು. ಸರ್ಕಾರದ ಯೋಜನೆಗಳು ಪ್ರತಿಯೊಬ್ಬರ ಮನೆಗೂ ತಲುಪುವಂತೆ ನೋಡಿ ಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಯೋಜನೆಯ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ರೋಹಿತ್ ಸಮಗ್ರ ಮಾಹಿತಿಯನ್ನು ಒದಗಿಸಿದರು. ಧಾರ್ಮಿಕ ಸಾಮಾಜಿಕ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುವ ಮೂಲಕ ಸ್ವಾಸ್ಥö್ಯ ಸಮಾಜ ನಿರ್ಮಾಣ ಮಾಡುವ ಗುರಿ ಯೋಜನೆಯದ್ದಾಗಿದೆ ಎಂದರು.

ಇದೇ ಸಂದರ್ಭ ಸಂಘದಿAದ ವ್ಯವಹಾರಗಳ ಮೇಲೆ ಸಾಲ ಸಂಘದ ಸದಸ್ಯರ ಮಕ್ಕಳ ವಿದ್ಯಾರ್ಥಿ ವೇತನ ಹಾಗೂ ಸದಸ್ಯರ ಜಾಮೀನುದಾರರ ಮತ್ತು ಸದಸ್ಯರ ಅಕಾಲಿಕ ಮರಣ ಉಂಟಾದ ಸಂದರ್ಭ ನೀಡಿದ ಸಾಲ ಮನ್ನಾ ಮೊದಲಾದ ಸೌಲಭ್ಯಗಳ ಅನುದಾನಗಳ ಪ್ರಮಾಣ ಪತ್ರಗಳನ್ನು ಶಾಸಕರು ಸದಸ್ಯರಿಗೆ ವಿತರಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕಿ ಎನ್.ಕೆ. ಮಾಲಾದೇವಿ ಅವರು ಧಾರ್ಮಿಕ ಆಚರಣೆಯಲ್ಲಿ ಮಹಿಳೆಯರ ಪಾತ್ರದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ವರಲಕ್ಷಿö್ಮ ಪೂಜಾ ಸಮಿತಿಯ ಅಧ್ಯಕ್ಷೆ ರಾಧಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಎನ್. ಚಂದ್ರಮೋಹನ್, ಕುಶಾಲನಗರ ಆಂಜನೇಯ ದೇವಾಲಯದ ಅಧ್ಯಕ್ಷ ವಿ.ಡಿ. ಪುಂಡರಿಕಾಕ್ಷ, ಉದ್ಯಮಿ ಕೆ.ಎಸ್. ರಾಜಶೇಖರ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಸಂಘದ ವಲಯ ಮೇಲ್ವಿಚಾರಕರಾದ ಪೂರ್ಣಿಮಾ, ಸೇವಾ ಪ್ರತಿನಿಧಿಗಳು ಮತ್ತಿತರರು ಇದ್ದರು. ಇದಕ್ಕೂ ಮುನ್ನ ಸಾಮೂಹಿಕ ಶ್ರೀ ವರ ಮಹಾಲಕ್ಷಿö್ಮ ಪೂಜಾ ಕಾರ್ಯಕ್ರಮ ನಡೆಯಿತು.