ಕೂಡಿಗೆ, ಸೆ. ೧೦: ಜಿಲ್ಲಾ ಪಂಚಾಯಿತಿ, ಸಾಕ್ಷರತಾ ಶಿಕ್ಷಣ ಇಲಾಖೆ, ತಾಲೂಕು ಶಿಕ್ಷಣಾಧಿ ಕಾರಿಗಳ ಕಚೇರಿ ವತಿಯಿಂದ ನೇರುಗಳಲೆ ಸರ್ಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಕೂಡಿಗೆ ಕ್ರೀಡಾಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟ ಶನಿವಾರ ಆರಂಭಗೊAಡಿತು.
ಕ್ರೀಡಾಶಾಲಾ ಮೈದಾನದಲ್ಲಿ ಪ್ರೌಢಶಾಲಾ ವಿಭಾಗದ ಓಟ ಸ್ಪರ್ಧೆಗೆ ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್. ರತ್ನ ಕುಮಾರ್ ಹಸಿರು ಬಾವುಟ ತೋರಿ ಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸುಕುಮಾರಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕುರುಂಬಯ್ಯ, ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಎ.ಎಲ್. ಲಕ್ಷö್ಮಣ, ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ನಾಗೇಶ್, ಕೂಡಿಗೆ ಕ್ರೀಡಾಶಾಲಾ ಪ್ರಾಂಶುಪಾಲ ದೇವಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್, ದೊಡ್ಡಯ್ಯ, ಸುನೀಲ್, ಬೋಜೇಗೌಡ ಇದ್ದರು. ಪ್ರಾಥಮಿಕ, ಪ್ರೌಢಶಾಲಾ ಬಾಲಕ, ಬಾಲಕಿಯರಿಗೆ ಓಟ ಸ್ಪರ್ಧೆ, ಎತ್ತರ ಜಿಗಿತ, ಉದ್ದ ಜಿಗಿತ, ಭಾರದ ಗುಂಡು ಎಸೆತ, ಚಕ್ರ ಎಸೆತ, ರಿಲೆ, ತ್ರಿವಿಧ ಜಿಗಿತ, ಭರ್ಜಿ ಎಸೆತ ಮತ್ತಿತರ ಕ್ರೀಡಾ ಚಟುವಟಿಕೆಗಳು ನಡೆಸ ಲಾಯಿತು.