ಮಡಿಕೇರಿ, ಸೆ. ೧೦: ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಎಸ್. ಬೋಸರಾಜು ಅವರನ್ನು ಕೊಡಗು ಜಿಲ್ಲಾ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಪ್ರದಾನ ಆಯುಕ್ತರದ ಕೆ.ಟಿ. ಬೇಬಿ ಮ್ಯಾಥ್ಯು ಜಿಲ್ಲಾ ಸಂಸ್ಥೆಯವರೊAದಿಗೆ ಭೇಟಿಯಾಗಿ ಬೇಡಿಕೆಗಳನ್ನು ಸಲ್ಲಿಸಿದರು.
ಮುಖ್ಯವಾಗಿ ಜಿಲ್ಲಾ ಪಂಚಾಯತ್ ಗ್ರಾಮ ಪಂಚಾಯತ್ ಪಟ್ಟಣ ಪಂಚಾಯತ್ ಗಳಿಂದ ಸರಕಾರದ ಆದೇಶ ದಂತೆ ಅನುದಾನ ನೀಡಬೇಕು ಎಂದು ಕೇಳಿಕೊಂಡAತೆ ತಕ್ಷಣ ಕ್ರಮ ವಹಿಸಿ ಸಂಬAಧಪಟ್ಟ ಅಧಿಕಾರಿಗಳನ್ನು ವಿಚಾರಿಸಿ ಜಿಲ್ಲಾ ಸಂಸ್ಥೆಗೆ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಹಾಗೂ ಜಿಲ್ಲಾ ಸಂಸ್ಥೆಗೆ ಭೇಟಿ ನೀಡಿ ಎಲ್ಲಾ ವಿಷಯಗಳಿಗೆ ಸಹಕರಿಸುವ ಭರವಸೆ ನೀಡಿದರು. ಜಿಲ್ಲಾ ಗೈಡ್ ಆಯುಕ್ತರಾದ ರಾಣಿ ಮಾಚಯ್ಯ ಹಾಗೂ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ ಉಪಸ್ಥಿತರಿದ್ದರು.