ಕರಿಕೆ, ಸೆ. ೧೦: ಇಲ್ಲಿಗೆ ಸಮೀಪದ ಹಳೆ ಮನೆ ಎಂಬಲ್ಲಿ ಭಾಗಮಂಡಲ- ಕರಿಕೆ ಪಾಣತ್ತೂರಿಗೆ ಸಂಪರ್ಕ ಕಲ್ಪಿಸುವ ಅಂತರರಾಜ್ಯ ಹೆದ್ದಾರಿ ಮಧ್ಯೆ ಮರವೊಂದು ಉರುಳಿ ಬಿದ್ದ ಪರಿಣಾಮವಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ನಡೆದಿದೆ. ಬಳಿಕ ಮರ ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.