ವೀರಾಜಪೇಟೆ, ಸೆ. ೧೦: ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಎಲ್ಲಾ ಮಕ್ಕಳಂತೆ ಅವರಿಗೂ ಉತ್ತಮ ಶಿಕ್ಷಣ ನೀಡಬೇಕು. ಸರಕಾರದಿಂದ ಅವರಿಗೆ ದೊರಕುವಂತ ಸೌಲಭ್ಯಗಳನ್ನು ನೀಡಲು ಪ್ರಯತ್ನಿಸುವುದಾಗಿ ವೀರಾಜಪೇಟೆ ಶಾಸಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಹೇಳಿದರು.

ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನದ ವತಿಯಿಂದ ವೀರಾಜಪೇಟೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ೨೦೨೨-೨೩ನೇ ಸಾಲಿನ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಆಯ್ಕೆಯಾದ ೨೩ ವಿದ್ಯಾರ್ಥಿಗಳಾದ ‘ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಸಾಧನ-ಸಲಕರಣೆ ವಿತರಣಾ ಕಾರ್ಯಕ್ರಮ' ಹಾಗೂ ಅಂತರರಾಷ್ಟಿçÃಯ ಸಾಕ್ಷರತಾ ದಿನಾಚರಣೆ ಅಂಗವಾಗಿ ನವ ಭಾರತ ಸಾಕ್ಷರತಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಸಾಧನ ಸಲಕರಣೆ ವಿತರಣೆ ಮಾಡಿದ ಶಾಸಕ ಎ.ಎಸ್. ಪೊನ್ನಣ್ಣ ಅವರು ಮಾತನಾಡಿ ವಿಶೇಷ ಅಗತ್ಯತೆಯುಳ್ಳ ಮಕ್ಕಳನ್ನು ಪ್ರತೀಯೊಬ್ಬರು ಪ್ರೀತಿಯಿಂದ ನೋಡಿಕೊಳ್ಳಬೇಕು. ಅವರ ಸೇವೆಯಿಂದ ನಮಗೂ ಪುಣ್ಯ ಬರುವಂತಾಗಲಿ. ಮುಂದಿನ ದಿನದಲ್ಲಿ ಸರಕಾರದ ಎಲ್ಲಾ ಸೌಲಭ್ಯಗಳು ಮಕ್ಕಳಿಗೆ ದೊರಕಲಿದೆ ಎಂದರು.ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಮಾತನಾಡಿ, ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಸರಕಾರದಿಂದ ಬಂದಿರುವ ೭ ವೀಲ್‌ಚೇರ್ ಹಾಗೂ ಎಂ.ಆರ್.ಕಿಟ್, ಮತ್ತು ಬುದ್ದಿಮಾಂದ್ಯ ಮಕ್ಕಳಿಗೆ ನಡೆದಾಡಲು ಸಹಾಯವಾಗುವಂತ ವಾಕರ್ ನೀಡಲಾಗುತ್ತಿದೆ. ಇದರ ಸೌಲಭ್ಯಗಳನ್ನು ಪೋಷಕರು ಪಡೆದುಕೊಳ್ಳುವಂತೆ ತಿಳಿಸಿದರಲ್ಲದೆ, ನವ ಭಾರತ ಸಾಕ್ಷರತಾ ಕಾರ್ಯಕ್ರಮವು ಈ ಹಿಂದೆ ಸಾಕ್ಷರ ಕಾವೇರಿ ಇದ್ದ ಸಂದರ್ಭ ಶೇ,೮೦ ರಷ್ಟು ವಯಸ್ಕರ ಶಿಕ್ಷಣ ಯಶಸ್ವಿಯಾಗಿದ್ದು ಇನ್ನು ಶೇ ೨೦ ರಷ್ಟು ಮಂದಿ ಕಲಿಯಬೇಕಾಗಿದೆ. ಆದ್ದರಿಂದ ಈ ಯೋಜನೆ ಮುಂದುವರಿಯಲಿದೆ ಎಂದರು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವನಜಾಕ್ಷಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ, ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್, ಉಪನ್ಯಾಸಕ ಶಿವಾನಂದ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ಕುಮಾರ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅರುಣ್ ಡಿಸೋಜ ಉಪಸ್ಥಿತರಿದ್ದರು.

ಶಿಕ್ಷಣ ಇಲಾಖೆಯ ಬಿ.ಐ.ಇ.ಆರ್.ಟಿ ಅಜಿತಾ ಕೆ.ಎಸ್.ಸ್ವಾಗತಿಸಿದರೆ, ಕೇಶವ ಮೂರ್ತಿ ವಂದಿಸಿದರು, ಬಿ.ಆರ್.ಪಿ ವಾಮನ ನಿರೂಪಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.