ಮಡಿಕೇರಿ, ಸೆ. ೧೦: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿ ಇದರ ವತಿಯಿಂದ ಇಂದು ಜಿಲ್ಲಾ ಕಚೇರಿಯಲ್ಲಿ "ದೇಶಭಕ್ತಿ ಗೀತಗಾಯನ" ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಸಾಮೂಹಿಕ ಪ್ರಾರ್ಥನೆ ಮಾಡಿ ನಂತರ ಗಿಡಕ್ಕೆ ನೀರುಹಾಕುವುದರ ಮೂಲಕ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ರಮೇಶ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದೇಶಭಕ್ತಿ ಗೀತೆಯು ನಮ್ಮ ದೇಶದ ಬಗ್ಗೆ ಅಭಿಮಾನ ಹೆಚ್ಚಿಸುವುದಲ್ಲದೆ ಉತ್ತಮ ಪ್ರಜೆಗಳಾಗಿ ಬೆಳೆಯಲು ಮಾಡಿರುವ ಕಾರ್ಯಕ್ರಮ ಎಂದು ಅವರು ಹೇಳಿದರು.
ಜಿಲ್ಲಾ ಪ್ರಧಾನ ಆಯುಕ್ತರಾದ ಕೆ. ಟಿ. ಬೇಬಿ ಮ್ಯಾಥ್ಯು ಮಾತನಾಡಿ, ಮಕ್ಕಳಲ್ಲಿ ಸಣ್ಣ ವಯಸ್ಸಿನಲ್ಲಿಯೇ ದೇಶದ ಬಗ್ಗೆ ಗೌರವ ಮತ್ತು ಅಭಿಮಾನ ಮೂಡಬೇಕು.
ಕಾರ್ಯಕ್ರಮದಲ್ಲಿ ಮೊದಲಿಗೆ ಕಬ್ಸ್, ಬುಲ್ ಬುಲ್, ಸ್ಕೌಟ್ಸ್, ಗೈಡ್ಸ್ ಮತ್ತು ರೇಂಜರ್ ವಿದ್ಯಾರ್ಥಿಗಳು ಕ್ರಮವಾಗಿ ದೇಶಭಕ್ತಿ ಗೀತೆಯನ್ನು ಹಾಡಿದರು. ಸ್ಥಳೀಯ ಸಂಸ್ಥೆಯಲ್ಲಿ ಪ್ರಥಮ ಬಂದವರು ಜಿಲ್ಲಾ ಸಂಸ್ಥೆಯು ನಡೆಸುವ ಗೀತ ಗಾಯನ ಸ್ಪರ್ಧೆಗೆ ಆಯ್ಕೆಯಾಗುತ್ತಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಖಜಾಂಚಿ ಪುಷ್ಪವೇಣಿ, ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ, ಸ್ಕೌಟ್ಸ್ ಮಾಸ್ಟರ್, ಕುಟ್ಟಪ್ಪ, ಬುಲ್ ಬುಲ್ಸ್ನ ಗಟ್ರೂಡ್ ಟಿ.ಜಿ, ಮತ್ತಿತರರು ಪಾಲ್ಗೊಂಡಿದ್ದರು. ಈ ದೇಶ ಭಕ್ತಿಗೀತೆಯ ತೀರ್ಪುಗಾರರಾಗಿ ಮುಕ್ಕಾಟಿರ ಅಂಜು ಸುಬ್ರಮಣಿ ಮತ್ತು ರಿನ್ಸಿ ಕೊಚ್ಚೆರ ಅವರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ನೀಡಲಾಯಿತು.
ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಅಜ್ಜಮಕ್ಕಡ ವಿನು ಕುಶಾಲಪ್ಪ ಸ್ವಾಗತಿಸಿದರೆ, ಜನರಲ್ ತಿಮ್ಮಯ್ಯ ಶಾಲೆಯ ಗೈಡ್ ಕ್ಯಾಪ್ಟನ್ ನಮಿತಾ ರಾವ್ ಅವರು ನಿರೂಪಿಸಿದರು. ಜಿಲ್ಲಾ ಸಂಘಟಕರಾದ ಯು.ಸಿ. ದಮಯಂತಿ ವಂದಿಸಿದರು.