ಮಡಿಕೇರಿ, ಸೆ. ೧೦: ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಚೇರಂಬಾಣೆ ಸಮೀಪದ ಪಾಕ ದುರ್ಗಾಪರಮೇಶ್ವರಿ ದೇವಾಲಯದ ರಸ್ತೆ ಅಭಿವೃದ್ಧಿ ಕಾರ್ಯವನ್ನು ತಕ್ಷಣವೇ ಕೈಗೊಳ್ಳಲು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಾಕತಮ್ಮೆ ಎಂದು ಖ್ಯಾತವಾಗಿರುವ ದುರ್ಗಾಪರಮೇಶ್ವರಿ ದೇವಾಲಯದ ಸಮಿತಿಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಇತ್ತೀಚೆಗೆ ಎ.ಎಸ್. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿ ಸುಮಾರು ೪೦೦ ಮೀಟರ್ ರಸ್ತೆ ಅಭಿವೃದ್ಧಿಗೆ ಕಾಂಗ್ರೆಸ್ ವಕ್ತಾರ ತೆನ್ನೀರ ಮೈನಾ ಅವರ ಮೂಲಕ ಕೋರಿಕೆ ಸಲ್ಲಿಸಿದ್ದರು. ಮುಂದಿನ ಡಿಸೆಂಬರ್ನಲ್ಲಿ ನಡೆಯಲಿರುವ ವಾರ್ಷಿಕ ಉತ್ಸವಕ್ಕೆ ಮೊದಲು ರಸ್ತೆಯನ್ನು ಅಭಿವೃದ್ಧಿ ಪಡಿಸಲು ಸೂಚಿಸಲಾಗಿದೆ ಎಂದು ಎ.ಎಸ್.ಪೊನ್ನಣ್ಣ ತಿಳಿಸಿದರು.