ಶ್ರೀಮಂಗಲ, ಸೆ. ೧೦: ಬಾಳೆಲೆಯಲ್ಲಿ ನಡೆಯುತ್ತಿರುವ ವೀರಾಜಪೇಟೆ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪೊನ್ನಂಪೇಟೆ ನಿನಾದ ಶಾಲೆಯ ಬಾಲಕರ ತಂಡ ಡಬಲ್ಸ್ ಹಾಗೂ ಸಿಂಗಲ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಇದೇ ಶಾಲೆಯ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಸಹ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸಿಂಗಲ್ಸ್ ಮತ್ತು ಡಬಲ್ಸ್ ನಲ್ಲಿಯೂ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.