ಮಡಿಕೇರಿ, ಸೆ. ೧೧: ‘ನನ್ನನ್ನು ಹುಡುಕಬೇಡಿ, ನನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಸಿಕ್ಕ ‘ಡೆತ್ ನೋಟ್’, ಜೊತೆಗೊಂದಿಷ್ಟು ದಾಖಲೆಗಳಿದ್ದ ಬ್ಯಾಗ್, ಪಕ್ಕದಲ್ಲಿಯೇ ಚಪ್ಪಲಿ, ಇವೆಲ್ಲ ದೊರೆತ್ತಿದ್ದು ಜಲಪಾತದ ಬಳಿ.. ಈ ರೀತಿ ಪ್ರಕರಣಗಳು ಕಂಡು ಬಂದರೆ. ಸಾವು ಸಂಭವಿಸಿರಬಹುದು ಎಂದು ಶಂಕಿಸುವುದು ಸಹಜ. ಈ ನಿಟ್ಟಿನಲ್ಲಿ ಕಳೆದ ೩ ದಿನಗಳಿಂದ ನಾಪತ್ತೆ ಯಾಗಿದ್ದ ಮಹಿಳೆಯೋರ್ವರಿಗಾಗಿ ಪೊಲೀಸರು, ಅಗ್ನಿಶಾಮಕದಳ, ಎನ್.ಡಿ.ಆರ್.ಎಫ್. ಜಲಪಾತದಲ್ಲಿ ಹುಡುಕಾಟ ನಡೆಸುತಿತ್ತು. ಮುಳುಗು ತಜ್ಞರು ನೀರಿಗಿಳಿದು ಶೋಧ ನಡೆಸುತ್ತಿದ್ದರು. ಆದರೆ, ಆಕೆ ಇದೀಗ ಬೆಂಗಳೂರಿನಲ್ಲಿದ್ದಾಳೆ ಎಂದು ಖಾತರಿಯಾಗಿದೆ.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಬಾರಸೆ ಗ್ರಾಮದಿಂದ ತಾ. ೫ ರಂದು ನಾಪತ್ತೆಯಾಗಿದ್ದ ಸರಸ್ವತಿ (೩೩) ಎಂಬಾಕೆಯ ದಾಖಲೆಗಳು ಹಾಗೂ ಆಕೆ ಬರೆದಿಟ್ಟಿದ್ದಾಳೆ ಎನ್ನಲಾದ ‘ಡೆತ್ನೋಟ್’ ನಗರದ ಹೊರವಲಯದ ಅಬ್ಬಿಜಲಪಾತ ಬಳಿ ತಾ. ೮ ರಂದು ಪತ್ತೆಯಾಗಿತ್ತು.
ನಾಪತ್ತೆಯಾದ ಕುರಿತು ಪಿರಿಯಾಪಟ್ಟಣ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಅಬ್ಬಿ ಜಲಪಾತ ಬಳಿ ಸರಸ್ವತಿಗೆ ಸೇರಿದ ವಸ್ತುಗಳು ದೊರೆತ ಹಿನ್ನೆಲೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪಿರಿಯಾಪಟ್ಟಣ ಪೊಲೀಸರನ್ನು ಸಂಪರ್ಕಿಸಿ ಈಕೆಯ ಕುರಿತು ಮಾಹಿತಿ ಪಡೆಯುವ ಸಂದರ್ಭ ಕೆಲವು ದಿನಗಳಿಂದ ನಾಪತ್ತೆಯಾ ಗಿರುವುದು ಗೊತ್ತಾಗಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಎನ್.ಡಿ.ಆರ್.ಎಫ್, ಅಗ್ನಿಶಾಮಕ ದಳ ಸಹಾಯದಿಂದ ಕಳೆದ ೩ ದಿನಗಳಿಂದ ಕಾರ್ಯಾ ಚರಣೆಗಿಳಿದಿತ್ತು. ಎಷ್ಟೇ ಹುಡುಕಾಟ ನಡೆಸಿದರೂ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ.
ಬೆಂಗಳೂರಿನಿAದ ಕರೆ.!