ಸುಂಟಿಕೊಪ್ಪ, ಸೆ. ೧೨: ಶ್ರೀ ಗೌರಿ ಗಣೇಶ ಹಬ್ಬ ಆಚರಣೆಯ ಸಂದರ್ಭ ಆಯೋಜಕರು ಸಾರ್ವಜನಿಕರಿಗೆ ತೊಂದರೆಯಾಗದAತೆ ಎಚ್ಚರ ವಹಿಸಬೇಕು ಎಂದು ಕುಶಾಲನಗರ ವೃತ್ತನಿರೀಕ್ಷಕ ರಾಜೇಶ್ ಕೋಟ್ಯಾನ್ ಹೇಳಿದರು.
ಇಲ್ಲಿನ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಶ್ರೀ ಗೌರಿ ಗಣೇಶ ಆಚರಣಾ ಸಮಿತಿಗಳ ಪೂರ್ವನಿಯೋಜಿತ ಸಭೆಯಲ್ಲಿ ಮಾತನಾಡಿದ ಅವರು, ಸರಕಾರವು ನೀಡಿರುವ ಮಾರ್ಗಸೂಚಿಗಳನ್ನು ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಆಯೋಜಕ ಸಮಿತಿಗಳು ಪಾಲಿಸಬೇಕು. ಪೊಲೀಸ್ ಠಾಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು. ಮುಂಜಾಗ್ರತಾ ಕ್ರಮವಾಗಿ ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸ್ಥಳದಲ್ಲಿ ಸಿಸಿ ಕ್ಯಾಮರಗಳನ್ನು ಅಳವಡಿಸುವುದರಿಂದ ಅಹಿತಕರ ಘಟನೆಗಳು ಸಂಭವಿಸದAತೆ ತಡೆಯಲು ಸಹಕರಿಯಾಗಲಿದೆ ಎಂದರು. ಮೂರ್ತಿಗಳ ವಿಸರ್ಜನೆಯ ವೇಳೆ ಅಲಂಕೃತ ಮಂಟಪ ಮೆರವಣಿಗೆ ತೆರಳುವ ಮಾರ್ಗಗಳ ಮಾಹಿತಿಯನ್ನು ಪೊಲೀಸ್ ಠಾಣೆಗೆ ತಿಳಿಸುವಂತೆ ಅವರು ಸೂಚಿಸಿದರು. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಶ್ರೀಧರ್, ಸರಕಾರದಿಂದ ಹೊರಡಿಸಿರುವ ಕಾನೂನು ಅನುಮತಿ ಪತ್ರಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್.ಐ. ಸ್ವಾಮಿ, ಎ.ಎಸ್.ಐ. ಶ್ರೀನಿವಾಸ್, ಪಂಚಾಯಿತಿ ಸದಸ್ಯ ಸೋಮನಾಥ್, ಕೊಡಗರಹಳ್ಳಿ ಸುನಿಲ್, ಪೊಲೀಸ್ ಸಿಬ್ಬಂದಿಗಳು ವಿವಿಧ ಗ್ರಾಮಗಳಿಂದ ಆಯೋಜಕರು ಇದ್ದರು.