ಕುಶಾಲನಗರ, ಸೆ. ೧೧ : ಗೌರಿ ಗಣೇಶ ಹಬ್ಬದ ಅಂಗವಾಗಿ ಕುಶಾಲನಗರ ಪಟ್ಟಣದಲ್ಲಿ ಈ ಸಾಲಿನಲ್ಲಿ ಒಟ್ಟು ೨೩ ಕಡೆಗಳಲ್ಲಿ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ.
ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕೋರಿದ್ದು ಪಟ್ಟಣದಲ್ಲಿ ಈ ಬಾರಿ ೨೩ ಕಡೆ ಗಣಪತಿ ವಿಗ್ರಹ ಪ್ರತಿಷ್ಠಾಪನೆ ನಡೆಸಿ ಪೂಜೆ ನಡೆಸುವುದಾಗಿ ಸಂಘ ಸಂಸ್ಥೆಗಳು ಸ್ಥಳೀಯ ಠಾಣೆಗಳಿಗೆ ಅರ್ಜಿ ಸಲ್ಲಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ತೊಡಕು ಉಂಟಾಗದAತೆ ನಿಯಮಾನುಸಾರ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ರೀತಿಯ ಎಚ್ಚರಿಕೆ ವಹಿಸುವಂತೆ ಪೊಲೀಸರು ಕಾರ್ಯಕ್ರಮ ಆಯೋಜಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.