ಕೂಡಿಗೆ, ಸೆ. ೧೨: ಸಾರ್ವಜನಿಕ ಶಿಕ್ಷಣ ಇಲಾಖೆಯ ನೇರುಗಳಲೆ ಪ್ರೌಢಶಾಲಾ ಸಂಯೋಗದೊAದಿಗೆ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಧ್ಯಾರ್ಥಿಗಳ ಹಾಕಿ ಪಂದ್ಯಾವಳಿ ಕೂಡಿಗೆ ಕ್ರೀಡಾ ಶಾಲೆ ಹಾಕಿ ಮೈದಾನದಲ್ಲಿ ನಡೆದವು.
ಕ್ರೀಡಾಕೂಟದ ಉದ್ಘಾಟನೆಯನ್ನು ಕೂಡಿಗೆ ಕ್ರೀಡಾ ಶಾಲೆಯ ಮುಖ್ಯೋಪಾಧ್ಯಾಯ ದೇವ್ ಕುಮಾರ್ ನೆರವೇರಿಸಿ ನಂತರ ಮಾತನಾಡಿ, ಪ್ರತಿಯೊಬ್ಬರಿಗೂ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಬಹು ಮುಖ್ಯವಾಗಿರುತ್ತದೆ, ಅದನ್ನು ಪ್ರಾಥಮಿಕ ಹಂತದಿAದಲೇ ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿಯಾದ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಡಾ, ಸದಾಶಿವ ಎಸ್, ಪಲೇದ್ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ದೈಹಿಕ ಕ್ಷಮತೆಯನ್ನು ಕಂಡುಕೊಳ್ಳಲು ಸಾಧ್ಯ, ಕ್ರೀಡೆಯಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿಯನ್ನು ಮೆರೆಯಬೇಕು ಎಂದರು. ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್. ರತ್ನ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ. ಬಸವರಾಜ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸುಕುಮಾರಿ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಲಕ್ಷö್ಮಣ್, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಶಿವಶಂಕರ್, ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷ ವಿರೂಪಾಕ್ಷ, ಸೇರಿದಂತೆ ತಾಲೂಕಿನ ದೈಹಿಕ ಶಿಕ್ಷಕರು ಭಾಗವಹಿದ್ದರು.