ಮಡಿಕೇರಿ, ಸೆ. ೧೧ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. ೧೪ ರಂದು ಬೆಳಿಗ್ಗೆ ೧೦.೩೦ ಗಂಟೆಯಿAದ ಮಧ್ಯಾಹ್ನ ೨ ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟರ್ಸ್, ಮಡಿಕೇರಿ, ಮಾಂಡವಿ ಮೋಟರ್ಸ್, ಮೈಸೂರು, ಅಟೋ ಲೈವ್, ಮೈಸೂರು, ಎಸ್ಎಲ್ಎನ್ ಕಾಫಿ ಕೂಡಿಗೆ, ಸಮರ್ಥ ನಿಧಿ ಲಿ., ಮಡಿಕೇರಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.೦೮೨೭೨-೨೨೫೮೨೧ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಕೋರಿದ್ದಾರೆ.