ಕೂಡಿಗೆ, ಸೆ. ೧೧: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೌರಿ ಗಣೇಶ ಹಬ್ಬ ಆಚರಣೆ ಸಂದರ್ಭದಲ್ಲಿ ಅನುಸರಿಸಬೇಕಾಗುವ ನಿಯಮಗಳು, ಮತ್ತು ಅವುಗಳ ಪಾಲನೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಹಿನ್ನೆಲೆ ಗ್ರಾಮಾಂತರ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ಡಿ.ವೈ.ಎಸ್.ಪಿ. ಗಂಗಾಧರಪ್ಪ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು.

ಸಭೆಯಲ್ಲಿ ಕುಶಾಲನಗರ ತಾಲೂಕು ಗ್ರಾಮಾಂತರ ಪ್ರದೇಶಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಂತರ ವಿಸರ್ಜನೆ ಸಂದರ್ಭದಲ್ಲಿ ಅನುಸರಿಸಬೇಕಾದ ಕಾನೂನಾತ್ಮಕ ವಿಷಯಗಳ ಬಗ್ಗೆ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂಘಟಕರಿಗೆ ಇಲಾಖೆಯ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದರು. ಅಲ್ಲದೆ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ವಿಷಯಗಳ ಬಗ್ಗೆ ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭ ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್ ಮತ್ತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ಮೋಹನ್ ರಾಜ್, ಸೇರಿದಂತೆ ವಿವಿಧ ಗ್ರಾಮಗಳ ಗಣಪತಿ ಸೇವೆ ಸಮಿತಿಯ ನೂರಾರು ಸಂಘಟಕರು ಹಾಜರಿದ್ದರು.