ಸೋಮವಾರಪೇಟೆ, ಸೆ. ೧೧: ಸಮೀಪದ ಯಡೂರು ಗ್ರಾಮದ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲೆ ಧನಲಕ್ಷಿö್ಮÃ ಅವರು, ವಿದ್ಯಾರ್ಥಿ ದೆಸೆಯಲ್ಲಿ ಸಮಯ ಹಾಳು ಮಾಡದೇ ಶ್ರದ್ಧೆಯಿಂದ ವಿದ್ಯಾರ್ಜನೆಯಲ್ಲಿ ತೊಡಗಿಸಿಕೊಂಡರೆ ಮತ್ತು ಸಮಯದ ಸದುಪಯೋಗ ಪಡಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು.
ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದ ಅವರು, ಕಾಲೇಜಿನ ಸೌಲಭ್ಯಗಳ ಸದ್ಭಳಕೆ ಮಾಡಿಕೊಂಡು ಮುಂದಿನ ಜೀವನವನ್ನು ಕಟ್ಟಿಕೊಳ್ಳುವಂತೆ ಕರೆ ನೀಡಿದರು.
ಕಾಲೇಜಿನ ಐ.ಕ್ಯು.ಎ.ಸಿ. ಸಂಚಾಲಕ ಎಂ.ಎಸ್. ಶಿವಮೂರ್ತಿ ಮಾತನಾಡಿ, ಕಾಲೇಜಿನ ಎಲ್ಲ ಚಟುವಟಿಕೆಗಳು ನಡೆಯುವಲ್ಲಿ ಐ.ಕ್ಯು.ಎ.ಸಿ. ಪಾತ್ರ, ನ್ಯಾಕ್ ಮೌಲ್ಯಮಾಪನದ ಮಹತ್ವದ ಕುರಿತು ತಿಳಿಸಿದರು. ಕಾಲೇಜಿನ ಕಚೇರಿ ಮತ್ತು ಆಡಳಿತಾತ್ಮಕ ವಿಷಯಗಳ ಕುರಿತು ಕಚೇರಿ ಸಿಬ್ಬಂದಿ ಹೆಚ್.ಜೆ. ಜವರ ಮಾಹಿತಿ ನೀಡಿದರು. ವೇದಿಕೆಯಲ್ಲಿ ವಾಣಿಜ್ಯ ಶಾಸ್ತç ವಿಭಾಗದ ಮುಖ್ಯಸ್ಥರಾದ ಪ್ರೊ. ಕೆ.ಎನ್.ಕುಸುಮ, ಎಂ.ಎA.ಸುನಿತಾ ಇದ್ದರು.