ಮಡಿಕೇರಿ, ಸೆ. ೧೧ : ಕರ್ನಾಟಕ ಲೋಕಾಯುಕ್ತದ ಕೊಡಗು ಜಿಲ್ಲೆಯ ಅಧಿಕಾರಿಗಳು ತಾ. ೧೩ ರಂದು ಕುಶಾಲನಗರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ತಾ. ೧೫ ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಯನ್ನು ಸ್ವೀಕರಿಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ.

ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿಯ ದೂ.ಸಂ.೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.