ಸೋಮವಾರಪೇಟೆ, ಸೆ. ೧೧ : ಸಮೀಪದ ತೋಳೂರು ಶೆಟ್ಟಳ್ಳಿಯಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕರಿಗೆ ಕಿರುಕಾಣಿಕೆಗಳನ್ನು ನೀಡಿ ಸನ್ಮಾನಿಸಿದರು.
ಇದರೊಂದಿಗೆ ಶಾಲಾ ಶಿಕ್ಷಕರಿಗೆ ವಿದ್ಯಾರ್ಥಿಗಳೇ ವಿವಿಧ ಮನೋರಂಜನೆಯ ಕ್ರೀಡೆಗಳನ್ನು ಆಯೋಜಿಸಿ ಪ್ರೋತ್ಸಾಹಕ ಬಹುಮಾನ ನೀಡಿದರು. ಇದಕ್ಕೂ ಮುನ್ನ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಅವರ ನೇತೃತ್ವದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ವಿವಿಧ ಗಿಡಗಳನ್ನು ನೆಟ್ಟರು.