ಪೊನ್ನಂಪೇಟೆ, ಸೆ. ೧೨: ಸಾಯಿಶಂಕರ್ ಶಾಲೆಯಲ್ಲಿ ವಿದ್ಯಾರ್ಥಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ಶಾಲೆಯ ವಿವಿಧ ವಿಭಾಗಗಳಿಗೆ ಆಯ್ಕೆಯಾದ ನಾಯಕರ ಬ್ಯಾಡ್ಜ್ಗಳನ್ನು ಅನಾವರಣಗೊಳಿಸುವುದರ ಮೂಲಕ ಜವಾಬ್ದಾರಿಗಳನ್ನು ವಹಿಸಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ರೀನಾ ಅವರು ಮಾತನಾಡಿ ವಿದ್ಯಾರ್ಥಿಗಳು ಪ್ರಾಯೋಗಿಕ ಮತ್ತು ವಾಸ್ತವಿಕೆಯ ನೆಲೆಗಟ್ಟಿನ ಮೇಲೆ ಕಾರ್ಯನಿರ್ವಹಿಸಿದರೆ, ಜೀವನದಲ್ಲಿ ಯಶಸ್ಸುಗೊಳಿಸಲು ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.