ತಮಿಳುನಾಡಿಗೆ ಪ್ರತಿದಿನ ೫ ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು ಸಿಡಬ್ಲ್ಯೂಆರ್ಸಿ ಸೂಚನೆ
ಬೆಂಗಳೂರು, ಸೆ. ೧೨: ತಮಿಳುನಾಡಿಗೆ ಮುಂದಿನ ೧೫ ದಿನಗಳವರೆಗೂ ಪ್ರತಿದಿನ ೫,೦೦೦ ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ. ರಾಜ್ಯದಲ್ಲಿ ಈಗಾಗಲೇ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿಗೆ ಕಟ್ಟಲಾಗಿರುವ ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ ೨೧ ಸಾವಿರ ಟಿಎಂಸಿಗೆ ಇಳಿದಿದೆ. ಆದರೆ ಕಾವೇರಿ ನೀರು ನಿಯಂತ್ರಣಾ ಸಮಿತಿ (ಸಿಡಬ್ಲ್ಯೂಆರ್ಸಿ) ತಮಿಳುನಾಡಿಗೆ ೧೫ ದಿನಗಳ ಕಾಲ ಪ್ರತಿನಿತ್ಯ ೫,೦೦೦ ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಮೋದಿ, ಶಾ ನಿರ್ಧಾರ: ಯಡಿಯೂರಪ್ಪ
ಬೆಂಗಳೂರು, ಸೆ. ೧೨: ೨೦೨೪ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಸಂಬAಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಕೇಂದ್ರ ನಾಯಕತ್ವ ನಿರ್ಧರಿಸಲಿದೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮಂಗಳವಾರ ಹೇಳಿದ್ದಾರೆ. ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುವುದಾಗಿ ಹೇಳಿರುವ ಯಡಿಯೂರಪ್ಪ, ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು. ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ತನಗೆ ಇದುವರೆಗೆ ಯಾವುದೇ ಹೆಚ್ಚಿನ ಮಾಹಿತಿ ಇಲ್ಲ, ಮೈತ್ರಿ ಬಗ್ಗೆ ಕೇಂದ್ರ ನಾಯಕರದ್ದೇ ಅಂತಿಮ ನಿರ್ಧಾರ ಎಂದರು. ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸಲು (ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ) ತಾ. ೧೩ ರಂದು ದೆಹಲಿಗೆ ತೆರಳುತ್ತಿರುವುದಾಗಿ ಯಡಿಯೂರಪ್ಪ ತಿಳಿಸಿದರು.
ರೊಚ್ಚಿಗೆದ್ದ ಶಾಲಾ ವಿದ್ಯಾರ್ಥಿನಿಯರಿಂದ ಬಿಇಒ ಕಾರು ಧ್ವಂಸ
ವೈಶಾಲಿ, ಸೆ. ೧೨: ಶಾಲೆಯಲ್ಲಿ ಮೂಲಸೌಕರ್ಯ ಕೊರತೆ ಹಾಗೂ ಸರಿಯಾದ ಆಸನ ವ್ಯವಸ್ಥೆ ಇಲ್ಲದ್ದಕ್ಕೆ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಬಿಇಒ ಕಾರಿಗೆ ದೊಣ್ಣೆ ಹಾಗೂ ಕಲ್ಲುಗಳಿಂದ ಹೊಡೆದು ಧ್ವಂಸಗೊಳಿಸಿದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ಮಹನಾರ್ನಲ್ಲಿರುವ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದಿದೆ. ಕಳಪೆ ಮೂಲಸೌಕರ್ಯ ವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾಗ ಸ್ಥಳಕ್ಕೆ ಬಂದ ಬ್ಲಾಕ್ ಶಿಕ್ಷಣಾಧಿಕಾರಿ ಅಹಲ್ಯಾ ಕುಮಾರ್ ಅವರ ಕಾರನ್ನು ವಿದ್ಯಾರ್ಥಿನಿಯರು ಧ್ವಂಸಗೊಳಿಸಿದ್ದಾರೆ. ಆಡಳಿತ, ಮಹಿಳಾ ಪೊಲೀಸರು ಕೆಲವು ವಿದ್ಯಾರ್ಥಿನಿಯರಿಗೆ ಕಪಾಳಮೋಕ್ಷ ಮಾಡಿದ್ದರಿಂದ ಕೆರಳಿದ ಪ್ರತಿಭಟನಾಕಾರರು ಶಿಕ್ಷಣಾಧಿಕಾರಿ ಕಾರನ್ನು ಧ್ವಂಸಗೊಳಿಸಿದರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಕೋಝಿಕ್ಕೋಡ್: ನಿಪಾ ವೈರಸ್ನಿಂದ ಇಬ್ಬರ ಸಾವು
ಕೋಝಿಕೋಡ್, ಸೆ. ೧೨: ಮಾರಣಾಂತಿಕ ನಿಪಾ ವೈರಸ್ನಿಂದ ಕೇರಳದ ಕೋಝಿಕೋಡ್ನಲ್ಲಿ ಇಬ್ಬರು ಸಾವು ಸಂಭವಿಸಿರುವುದು ದೃಢಪಟ್ಟಿದೆ. ಮೃತಪಟ್ಟವರು ಮತ್ತು ಆಸ್ಪತ್ರೆಗೆ ದಾಖಲಾದವರ ರಕ್ತದ ಮಾದರಿಗಳನ್ನು ಪುಣೆಯಲ್ಲಿರುವ ರಾಷ್ಟಿçÃಯ ವೈರಾಣು ಸಂಸ್ಥೆಗೆ ಕಳುಹಿಸಲಾಗಿತ್ತು. ಮಂಗಳವಾರ ಸಂಜೆ ಈ ದೃಢೀಕರಣ ಬಂದಿದೆ. ಇಬ್ಬರು ಮೃತ ವ್ಯಕ್ತಿಗಳ ಸಂಪರ್ಕಕ್ಕೆ ಬಂದ ೭೦ಕ್ಕೂ ಹೆಚ್ಚು ವ್ಯಕ್ತಿಗಳನ್ನು ಗುರುತಿಸಲಾಗಿದೆ ಮತ್ತು ಅವರ ಮೇಲೆ ನಿಗಾ ಇರಿಸಲಾಗಿದೆ. ಈ ಹಿಂದೆ ಕೇರಳದ ಆರೋಗ್ಯ ಇಲಾಖೆ ಅಧಿಕಾರಿಗಳು ಅಸಹಜ ಸಾವು ಎಂದು ಘೋಷಿಸಿದ್ದರು. ಮೃತರಿಬ್ಬರು ಕ್ರಮವಾಗಿ ಕುಟ್ಟಿಯಾಡಿಯ ಆಯಂಚೇರಿ ಮತ್ತು ನಡಪ್ಪುರಂ ಕ್ಷೇತ್ರದ ಮರುತೋಂಕರ ಪ್ರದೇಶದವರು ಎಂದು ಗುರುತಿಸಲಾಗಿದ್ದು, ಈ ಜಿಲ್ಲೆಗಳಿಗೆ ಜಿಲ್ಲಾಡಳಿತ ಮಂಗಳವಾರ ರಜೆ ಘೋಷಿಸಿತ್ತು.
ಅತ್ಯಾಚಾರ ಪ್ರಕರಣ ದಾಖಲಿಸಿದ್ದಕ್ಕೆ ಹತ್ಯೆ!
ಪಾಲ್ಘರ್, ಸೆ. ೧೨: ತನ್ನ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ ನಂತರ ಮಹಾರಾಷ್ಟçದ ಪಾಲ್ಘರ್ ಜಿಲ್ಲೆಯ ೪೩ ವರ್ಷದ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಪಾರ್ಟನರ್ ಅನ್ನು ಕೊಂದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಆಗಸ್ಟ್ ೯ ಮತ್ತು ೧೨ರ ನಡುವೆ ಈ ಘಟನೆ ನಡೆದಿದ್ದು, ೨೮ ವರ್ಷದ ಸಂತ್ರಸ್ತೆಯ ಶವ ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ. ಪಾಲ್ಘರ್ನ ವಸಾಯಿ ಪ್ರದೇಶದ ನಿವಾಸಿಯಾಗಿರುವ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ ಎಂದು ವಸಾಯಿ ಸಹಾಯಕ ಪೊಲೀಸ್ ಆಯುಕ್ತ ಪದ್ಮಜಾ ಬಡೆ ತಿಳಿಸಿದ್ದಾರೆ. ಸಂತ್ರಸ್ತೆಯು ಆರೋಪಿಯ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು. ಇದರಿಂದ ಆರೋಪಿ ಕೋಪಗೊಂಡಿದ್ದ. ಮಹಿಳೆ ದೂರನ್ನು ಹಿಂಪಡೆಯಲು ನಿರಾಕರಿಸಿದ್ದರಿಂದ, ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂದು ಬಡೆ ತಿಳಿಸಿದ್ದಾರೆ.